ಎಲೆಕ್ಷನ್ ಬಳಿಕ ಬೆಳಗಾವಿಗೆ ಭೇಟಿ ನೀಡಿದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು

ಗುರುವಾರ, 25 ಏಪ್ರಿಲ್ 2019 (11:44 IST)
ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಬೆಳಗಾವಿಗೆ ಭೇಟಿ ನೀಡಿದ್ದಾರೆ. ಕೆ.ಎಲ್.ಇ  ವಿಶ್ವವಿದ್ಯಾಲಯದ 9 ನೇ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾರೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು.

ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರನ್ನ ಜಿಲ್ಲಾ ಮಂತ್ರಿ ಸತೀಶ್ ಜಾರಕಿಹೊಳಿ, ಕೆ.ಎಲ್.ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ವಾಗತಿಸಿಕೊಂಡಿದ್ದಾರೆ.

ಇಂದು ನಡೆಯಲಿರುವ ಘಟಿಕೋತ್ಸವದಲ್ಲಿ ನಾಯ್ಡು ಭಾಗಿಯಾಗಿದ್ದಾರೆ. ಘಟಿಕೋತ್ಸವದಲ್ಲಿ ಉಪರಾಷ್ಟ್ರಪತಿ ಜೊತೆಗೆ ಭಾಗಿಯಾಗಿದ್ದಾರೆ ರಾಜ್ಯಪಾಲ ವಜುಭಾಯ ವಾಲಾ.

26 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, 1110 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ ಗಣ್ಯರು.ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ನರೇಗಾ ಕೆಲಸಕ್ಕೆ ಹೊರಟವರು ಹೆಣವಾಗಿದ್ದು ಹೇಗೆ?