Publish Date: Tue, 06 Nov 2018 (15:56 IST)
Updated Date: Tue, 06 Nov 2018 (16:04 IST)
ರಾಜ್ಯದ ಮೂರು ಲೋಕಸಭಾ ಮತ್ತು ಎರಡು ವಿಧಾನಸಭಾ ಕ್ಷೇತಗಳ ಉಪಚುನಾವಣೆ ಫಲಿತಾಂಶ ಹಿನ್ನಲೆ
ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಿಂದ ವಿಜಯೋತ್ಸವ ನಡೆಯಿತು.
ಹಾವೇರಿಯಲ್ಲಿ ಮಾಜಿ ಸಚಿವರಾದ ರುದ್ರಪ್ಪ ಲಮಾಣಿ ಮತ್ತು ಬಸವರಾಜ ಶಿವಣ್ಣನವರ ನೇತೃತ್ವದಲ್ಲಿ ವಿಜಯೋತ್ಸವ ಆಚರಣೆ ಮಾಡಲಾಯಿತು.
ಮೆರವಣಿಗೆ ಮುಖಾಂತರ ತೆರಳಿ, ನಂತರ ಸಿದ್ದಪ್ಪ ವೃತ್ತದಲ್ಲಿ ಸೇರಿದ ನೂರಾರು ಕಾರ್ಯಕರ್ತರು ಪಕ್ಷದ ಪರ ಜೈಕಾರ ಹಾಕಿದರು. ಪಠಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲಿಯೂ ಸಹ, ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.