Publish Date: Fri, 21 Aug 2026 (11:39 IST)
Updated Date: Fri, 21 Aug 2026 (11:43 IST)
ಬೆಂಗಳೂರು: ಬಿ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಇಂದೂ ವಿಪಕ್ಷ ಬಿಜೆಪಿ ಪ್ರತಿಭಟನೆ ಬಿರುಸುಗೊಳಿಸಿದೆ. ಇಂದು ಬಿಜೆಪಿ ನಾಯಕರು ಕಪ್ಪು ಟಿ ಶರ್ಟ್ ಧರಿಸಿ ವಿಧಾನಸೌಧಕ್ಕೆ ನುಗ್ಗಲು ಪ್ರಯತ್ನಿಸಿದ್ದಾರೆ.
ವಿಧಾನಸೌಧಕ್ಕೆ ಘೋಷಣೆಗಳನ್ನು ಕೂಗುತ್ತಾ ಕಾಲ್ನಡಿಗೆಯಲ್ಲಿ ಬಂದ ಬಿಜೆಪಿ ನಾಯಕರು ಬಳಿಕ ಸದನಕ್ಕೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಮಾರ್ಷಲ್ ಗಳು ಅವರನ್ನು ತಡೆಯುವ ಪ್ರಯತ್ನ ನಡೆಸಿದ್ದಾರೆ. ಈ ವೇಳೆ ತೀವ್ರ ವಾಗ್ವಾದ ನಡೆದಿದೆ.
ಆರ್ ಅಶೋಕ್, ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಘೋಷಣೆ ವಾಕ್ಯಗಳಿರುವ ಕಪ್ಪು ಬಣ್ಣದ ಟಿ ಶರ್ಟ್ ಧರಿಸಿ ಬಂದಿದ್ದಾರೆ. ವಾಲ್ಮೀಕಿ ಹಗರಣದಲ್ಲಿ ಕಳಂಕಿತರಾಗಿರುವ ನಾಗೇಂದ್ರರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿರುವುದರ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ನಾಗೇಂದ್ರ ರಾಜೀನಾಮೆ ನೀಡುವವರೆಗೂ ನಮ್ಮ ಪ್ರತಿಭಟನೆ ನಿಲ್ಲಲ್ಲ, ಸದನ ನಡೆಯಲು ಬಿಡಲ್ಲ ಎಂದು ಬಿಜೆಪಿ ನಾಯಕರು ಸವಾಲು ಹಾಕಿದ್ದಾರೆ.
ಇನ್ನೊಂದೆಡೆ ಬಿಜೆಪಿ ನಾಯಕರ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್, ನಾವು ಸದನದಲ್ಲಿ ಚರ್ಚೆಗೆ ಸಿದ್ಧರಿದ್ದೇವೆ. ಬಿಜೆಪಿ ನಾಯಕರು ಚರ್ಚೆಗೆ ಬರಬೇಕು. ಅದು ಬಿಟ್ಟು ಈ ರೀತಿ ಪ್ರತಿಭಟನೆ ಮಾಡುತ್ತಿರುವುದು ಸರಿಯಲ್ಲ. ಇದೆಲ್ಲಾ ಅವರ ನಾಯಕ ಮೋದಿ ಮತ್ತು ಅಮಿತ್ ಶಾರನ್ನು ರಕ್ಷಣೆ ಮಾಡಲು ಮಾಡುತ್ತಿರುವ ತಂತ್ರ ಎಂದು ವಾಗ್ದಾಳಿ ನಡೆಸಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ