ಬೆಂಗಳೂರು: ಲಂಚ ಪಡೆಯುವಾಗ ಕೆಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದ ರಾಜು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಹಾಕಿಕೊಂಡಿದ್ದಾರೆ. ಬಳಿಕ ಮಾಡಿದ್ದೇನು ಈ ವಿಡಿಯೋ ನೋಡಿ.
ಪೊಲೀಸ್ ಇನ್ಸ್ ಪೆಕ್ಟರ್ ಗೋವಿಂದರಾಜು 4 ಲಕ್ಷ ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂದಿಸಿದ ಕೇಸ್ ನಲ್ಲಿ ವ್ಯಕ್ತಿಯಬ್ಬರಿಗೆ ಸಿಕ್ಕಿ ಹಾಕಿಸುವುದಾಗಿ ಬೆದರಿಕೆ ಹಾಕಿ ಲಂಚ ಪೀಕಿದ್ದರು.
ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ ಘಟನೆ ನಡೆದಿದೆ. ಲಂಚಕ್ಕೆ ಬೇಡಿಕೆಯಿಡುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು ತಕ್ಷಣವೇ ಇನ್ಸ್ ಪೆಕ್ಟರ್ ಗೋವಿಂದರಾಜು ಅವರನ್ನು ವಶಕ್ಕೆ ಪಡೆಯಲಾಗಿದೆ.
ಲೋಕಾಯುಕ್ತ ಪೊಲೀಸರು ನಾಲ್ಕೂ ಕಡೆಯಿಂದ ತಮ್ಮನ್ನು ಲಾಕ್ ಮಾಡಿದಾಗ ಮುಜುಗರ, ಅವಮಾನಕ್ಕೀಡಾದ ಇನ್ಸ್ ಪೆಕ್ಟರ್ ಗೋವಿಂದ ರಾಜು ಕಿರುಚಾಡಿದ್ದಾರೆ. ಆದರೆ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಹಿಡಿದು ತಮ್ಮ ವಶಕ್ಕೆ ಪಡೆದಿದ್ದಾರೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಈ ಅಧಿಕಾರಿಗೆ ತಕ್ಕ ಪಾಠ ಕಲಿಸಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.