Publish Date: Tue, 30 Jun 2026 (14:03 IST)
Updated Date: Tue, 30 Jun 2026 (14:05 IST)
ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮತಪಟ್ಟಿ ಪರಿಷ್ಕರಣೆ ಅಭಿಯಾನ ಆರಂಭವಾಗಿದೆ. ಸಿಎಂ ಡಿಕೆ ಶಿವಕುಮಾರ್ ಮನೆಯಿಂದಲೇ ಎಸ್ಐಆರ್ ಪ್ರಕ್ರಿಯೆ ಶುರುವಾಗಿದೆ.
ಇದಕ್ಕೂ ಮೊದಲು ಸಂದೇಶ ನೀಡಿದ್ದ ಸಿಎಂ ಡಿಕೆ ಶಿವಕುಮಾರ್ ಎಲ್ಲರೂ ಮತಪಟ್ಟಿ ಪರಿಷ್ಕರಣೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದ್ದರು. ಮತಪಟ್ಟಿಯಲ್ಲಿ ಹೆಸರಿಲ್ಲದೇ ಹೋದರೆ ಗ್ಯಾರಂಟಿಯೂ ಸಿಗಲ್ಲ ಎಂದಿದ್ದರು.
ಇಂದು ಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಅಧಿಕಾರಿಗಳ ತಂಡ ಎಲ್ಲಾ ಮಾಹಿತಿ ಸಂಗ್ರಹಿಸಿಕೊಂಡಿದೆ. ಅಧಿಕಾರಿಗಳು ನೀಡಿದ ಫಾರಂನ್ನು ತಾವೇ ಭರ್ತಿ ಮಾಡಿ ಎಲ್ಲಾ ಮಾಹಿತಿಗಳನ್ನು ಸಿಎಂ ಡಿಕೆ ಶಿವಕುಮಾರ್ ನೀಡಿದ್ದಾರೆ.
ಬಳಿಕ ಜನತೆಗೆ ಸಂದೇಶ ನೀಡಿರುವ ಅವರು ನಾನು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಿ, ನೋಂದಣಿ ಮಾಡುವ ಮೂಲಕ ನನ್ನ ಕರ್ತವ್ಯ ನಿಭಾಯಿಸಿದ್ದೇನೆ. ನಾಡಿನ ಪ್ರತಿಯೊಬ್ಬ ಅರ್ಹ ಮತದಾರರೂ ಬಿಎಲ್‌ಓಗಳಿಗೆ ಸಹಕರಿಸಿ, ನಿಮ್ಮ ಮತದಾನದ ಹಕ್ಕನ್ನು ಭದ್ರಪಡಿಸಿಕೊಳ್ಳಬೇಕಾಗಿ ಮನವಿ ಮಾಡುತ್ತೇನೆ ಎಂದಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ