Webdunia - Bharat's app for daily news and videos

Install App

ವಿಧಾನ ಪರಿಷತ್ ಉಪ ಚುನಾವಣೆ: ಬಿಜೆಪಿಯ ಕಿಶೋರ್ ಕುಮಾರ್ ಜಯಭೇರಿ

Sampriya
ಗುರುವಾರ, 24 ಅಕ್ಟೋಬರ್ 2024 (14:09 IST)
Photo Courtesy X
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ನಡೆದ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪುತ್ತೂರಿನ ಕಿಶೋರ್ ಕುಮಾರ್ ಬೊಟ್ಯಾಡಿ ಜಯಭೇರಿ ಬಾರಿಸಿದ್ದಾರೆ.

ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅ.21ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು.

ಗುರುವಾರ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಿತು. 1693 ಮತಗಳ ಅಂತರದೊಂದಿಗೆ ಕಿಶೋರ್ ಕುಮಾರ್ ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ ಅವರನ್ನು ಸೋಲಿಸಿದ್ದಾರೆ.  

ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಯಿತು. ಬಿಜೆಪಿ ಅಭ್ಯರ್ಥಿಯು 3655 ಮತ, ಕಾಂಗ್ರೆಸ್ 1958, ಎಸ್​ಡಿಪಿಐ 195, ಪಕ್ಷೇತರ 9 ಮತ್ತು 89 ಅಸಿಂಧು ಮತಗಳಾಗಿವೆ.

ಕಿಶೋರ್ ಗೆಲುವು ಸಾಧಿಸುತ್ತಿದ್ದಂತೆಯೇ ಪಿವಿಎಸ್ ವೃತ್ತದ ಬಳಿ ಇರುವ ಬಿಜೆಪಿ ಜಿಲ್ಲಾ ಕಚೇರಿ ಎದುರು ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.



 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments