Select Your Language

Notifications

webdunia
webdunia
webdunia
webdunia

ನವೆಂಬರ್ 19ಕ್ಕೆ ಎಎಪಿಯಿಂದ ವಿಧಾನಸೌಧಕ್ಕೆ ಮುತ್ತಿಗೆ

ನವೆಂಬರ್ 19ಕ್ಕೆ ಎಎಪಿಯಿಂದ  ವಿಧಾನಸೌಧಕ್ಕೆ ಮುತ್ತಿಗೆ
bangalore , ಗುರುವಾರ, 17 ನವೆಂಬರ್ 2022 (20:29 IST)
ರಸ್ತೆ ಗುಂಡಿಗಳಿಗೆ ವಾಹನ ಸವಾರರು ಬಲಿಯಾಗುತ್ತಿರುವ ಪ್ರಕರಣಗಳು ಏರಿಕೆಯಾಗುತ್ತಿದ್ದರೂ ಈ ಕುರಿತು ನಿರ್ಲಕ್ಷ್ಯ ವಹಿಸಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಾರ್ಟಿಯು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಶನಿವಾರದಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಕುರಿತು ಮಾಹಿತಿ ನೀಡಿದ ಎಎಪಿ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ, “ಇತ್ತೀಚಿನ ದಿನಗಳಲ್ಲಿ ರಸ್ತೆಗುಂಡಿಗಳಿಂದಾಗಿ ಅಪಘಾತಗಳು, ಗಾಯಗಳು, ಸಾವುಗಳು ಸಾಮಾನ್ಯವಾಗಿವೆ. ಸರ್ಕಾರದ ನಿರ್ಲಕ್ಷ್ಯ ಹಾಗೂ ಭ್ರಷ್ಟಾಚಾರದಿಂದಾಗಿ ಅಮಾಯಕ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಗುಂಡಿಗಳಿಗೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ತು ಈ ಸರ್ಕಾರಕ್ಕೆ ಇಲ್ಲ. ಜನವಿರೋಧಿಯಾಗಿರುವ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಾರ್ಟಿಯು ನವೆಂಬರ್ 19ರ ಶನಿವಾರದಂದು ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ನಂತರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದೆ. ಈ ಮೂಲಕ ಭ್ರಷ್ಟ ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಿದೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

4 ವರ್ಷಗಳಿಂದ ಟಾರ್ ಕಾಣದ ರೋಜರ್ ರಸ್ತೆ