Select Your Language

Notifications

webdunia
webdunia
webdunia
webdunia

ತಮಿಳುನಾಡು ರಾಜಕೀಯದಲ್ಲಿ ಸುಗಮವಾದ ವಿಜಯ್ ಸಿಎಂ ಹಾದಿ, ಮಹತ್ವದ ಬೆಳವಣಿಗೆ

Thalapathy vijay
ಟಿವಿಕೆ ಮುಖ್ಯಸ್ಥ ವಿಜಯ್ ಅವರ  ತಮಿಳಗ ವೆಟ್ರಿ ಕಳಗಂ (ಟಿವಿಕೆ) ನೇತೃತ್ವದ ಸರ್ಕಾರ ರಚನೆಗೆ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಬೆಂಬಲ ನೀಡಲಿದೆ ಎಂದು ಪಕ್ಷದ ಉನ್ನತ ನಾಯಕರೊಬ್ಬರು ದಿ ಹಿಂದೂಗೆ ಮಾಹಿತಿ ನೀಡಿದ್ದಾರೆ. ಈ ಮೂಲಕ ವಿಜಯ್ ಅವರ ಸಿಎಂ ಹಾದಿ ಸುಗಮವಾಗಲಿದೆ. 

ಪಕ್ಷದ ಅಧ್ಯಕ್ಷ ತೊ. ತಿರುಮಾವಳವನ್ ಅವರು ಶೀಘ್ರದಲ್ಲೇ ಘೋಷಣೆ ಮಾಡಲಿದ್ದು, ಪಕ್ಷದ ನಿಲುವಿನ ಬಗ್ಗೆ ಎಲ್ಲಾ ಊಹಾಪೋಹಗಳಿಗೆ ಅಂತ್ಯ ಹಾಡಲಿದ್ದಾರೆ.

ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಸಿಕೆ 2 ಸ್ಥಾನಗಳನ್ನು ಪಡೆದುಕೊಂಡಿದೆ. ಟಿವಿಕೆ 108 ಸ್ಥಾನಗಳನ್ನು ಪಡೆದುಕೊಂಡು ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಸರ್ಕಾರ ರಚಿಸಲು 118 ಸ್ಥಾನಗಳು ಬೇಕಾಗಿದೆ.

ಸತತ ಮೂರು ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ವಿಜಯ್‌ ಅವರಿಗೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಹೇಳಿದ್ದರು. ಇದೀಗ ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಮಾಹಿತಿ ಪ್ರಕಾರ  ವಿಜಯ್‌ಗೆ ಬೆಂಬಲ ಸೂಚಿಸಲು ವಿಸಿಕೆ ಸಿದ್ಧವಾಗಿದೆ ಎನ್ನಲಾಗಿದೆ. 

5 ಸ್ಥಾನಗಳನ್ನು ಪಡೆದುಕೊಂಡಿರುವ ಕಾಂಗ್ರೆಸ್‌ ಈಗಾಗಲೇ ಬೆಂಬಲ ಘೋಷಿಸಿದ್ದು, ಸಿಪಿಐ ಮತ್ತು ಸಿಪಿಐ(ಎಂ) ಕೂಡ ಬೆಂಬಲ ನೀಡುವುದಾಗಿ ಹೇಳಿವೆ. ಇದೀಗ ವಿಸಿಕೆಯು ಬೆಂಬಲ ವ್ಯಕ್ತಪಡಿಸಿದ್ದು, ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುಣಿಗಲ್ ಭೀಕರ ರಸ್ತೆ ಅಪಘಾತ: ದಂಪತಿ ಸೇರಿ ನಾಲ್ವರು ಸ್ಥಳದಲ್ಲೇ ದುರ್ಮರಣ