Select Your Language

Notifications

webdunia
webdunia
webdunia
webdunia

ನಾಳೆಯಿಂದ ವಿಜಯಸಂಕಲ್ಪ ರಥಯಾತ್ರೆ : ಬೊಮ್ಮಾಯಿ

ನಾಳೆಯಿಂದ ವಿಜಯಸಂಕಲ್ಪ ರಥಯಾತ್ರೆ : ಬೊಮ್ಮಾಯಿ
ಬೆಂಗಳೂರು , ಶನಿವಾರ, 21 ಜನವರಿ 2023 (11:25 IST)
ಬೆಂಗಳೂರು : ರಾಜ್ಯದ ನಾಲ್ಕು ದಿಕ್ಕುಗಳಿಂದ ರಥಯಾತ್ರೆಯನ್ನು ಫೆಬ್ರವರಿ ಅಂತ್ಯದಲ್ಲಿ ಆರಂಭಿಸಲು ರೂಪರೇಷೆ ಸಿದ್ಧತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪಕ್ಷದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಾಳೆ ಪ್ರಾರಂಭವಾಗುವ ಬೂತ್ ಮಟ್ಟದ ವಿಜಯಸಂಕಲ್ಪ ಯಾತ್ರೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ  ಭಾಗವಹಿಸಲು ಬರುತ್ತಿದ್ದಾರೆ. ವಿಜಯ ಯಾತ್ರೆ ಅರಂಭಿಸುತ್ತಿದ್ದಾರೆ. ನಾನು ತುಮಕೂರಿನಲ್ಲಿ ಯಾತ್ರೆಯನ್ನು ಆರಂಭಿಸುತ್ತಿದ್ದೇನೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಪಟ್ಟಿಯನ್ನು ಮನೆಮನೆಗೆ ತಲುಪಿಸುವುದು,

ತಾಲೂಕು ಮಟ್ಟದ ಸಮ್ಮೇಳನಗಳನ್ನು, ಹಲವು ಮೋರ್ಚಾಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಎಲ್ಲೆಡೆ ಏರ್ಪಡಿಸಲು ತೀರ್ಮಾನಿಸಲಾಗಿದೆ. ಭಾಜಪ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ. ಚುನಾವಣೆ ತಯಾರಿ, ಪಕ್ಷದ ಸಂಘಟನೆ ಹಾಗೂ ಜನಸಂಪರ್ಕದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಗೆ ಮಾನವನ ಮೂಳೆ ತಿನ್ನುವಂತೆ ಒತ್ತಾಯಿಸಿದ ಪತಿ!