Select Your Language

Notifications

webdunia
webdunia
webdunia
webdunia

ಬರ್ಬರ ಹತ್ಯೆಯಾದ ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ಪರಿಹಾರ ಘೋಷಿಸಿದ ವಿಜಯೇಂದ್ರ

Hindu activist Suhas Shetty, Karnataka BJP, BJP state president B.Y. Vijayendra

Sampriya

ಮಂಗಳೂರು , ಶುಕ್ರವಾರ, 2 ಮೇ 2025 (15:36 IST)
Photo Courtesy X
ಮಂಗಳೂರು: ಗುರುವಾರ ರಾತ್ರಿ ದುಷ್ಕರ್ಮಿಗಳಿಂದ ಬರ್ಬರ ಹತ್ಯೆಯಾದ ಸುಹಾಸ್ ಶೆಟ್ಟಿ  ಕುಟುಂಬಕ್ಕೆ ಬಿಜೆಪಿಯಿಂದ ₹ 25 ಲಕ್ಷ ಪರಿಹಾರ ನೀಡುವುದಾಗಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ  ಘೋಷಣೆ ಮಾಡಿದ್ದಾರೆ.

ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಪಕ್ಷದ ಪರವಾಗಿ 25 ಲಕ್ಷ ಪರಿಹಾರ ನೀಡುವ ತೀರ್ಮಾನ ಮಾಡಿದ್ದೇವೆ. ಮುಖ್ಯಮಂತ್ರಿ, ಗೃಹಸಚಿವರು ಘಟನೆಯ ಗಂಭೀರತೆ ಅರ್ಥ ಮಾಡಿಕೊಳ್ಳಬೇಕು. ಸರ್ಕಾರದಿಂದ ಪರಿಹಾರ ನೀಡಬೇಕು. ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ನಡೆಸಬೇಕು ಎಂದು ಒತ್ತಾಯಿಸಿದರು.

ಪೆಹಲ್ಗಾಮ್ ಹತ್ಯೆ ಮರೆಯುವ ಮೊದಲೇ ಮಂಗಳೂರಿನಲ್ಲಿ ಘಟನೆ ನಡೆದಿರುವುದು ಖಂಡನಾರ್ಹ. ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಪೊಲೀಸ್ ಇಲಾಖೆ ವೈಫಲ್ಯ ಮೇಲ್ನೋಟಕ್ಕೆ ಕಂಡು ಬರ್ತಿದೆ. ಜೀವಕ್ಕೆ ರಕ್ಷಣೆ ನೀಡದಿರುವುದು ಪೊಲೀಸರ ವೈಫಲ್ಯ ಎಂದು ಮೃತ ಸುಹಾಸ್ ಶೆಟ್ಟಿ ಅಂತಿಮ ದರ್ಶನದ ಬಳಿಕ ಅವರು ಹೇಳಿದರು.

ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ ಕುಟುಂಬಕ್ಕೆ ಧೈರ್ಯ ಹೇಳುವ ಪ್ರಯತ್ನ ಮಾಡಿದ್ದೇವೆ. ಬಿಜೆಪಿಯ ಮುಖಂಡರು, ಕಾರ್ಯಕರ್ತರು ಅವರ ಕುಟುಂಬದ ಜೊತೆ ಇದ್ದೇವೆ. ಕುಟುಂಬದ ಆಧಾರ ಸ್ತಂಭ ಕಳಚಿ ಬಿದ್ದಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ: ಮರದ ಅಡಿಯಲ್ಲಿ ಜಿಲ್ಲಾಧಿಕಾರಿ ಕರ್ತವ್ಯ