ಬರ್ಬರ ಹತ್ಯೆಯಾದ ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ಪರಿಹಾರ ಘೋಷಿಸಿದ ವಿಜಯೇಂದ್ರ

Sampriya
ಶುಕ್ರವಾರ, 2 ಮೇ 2025 (15:36 IST)
Photo Courtesy X
ಮಂಗಳೂರು: ಗುರುವಾರ ರಾತ್ರಿ ದುಷ್ಕರ್ಮಿಗಳಿಂದ ಬರ್ಬರ ಹತ್ಯೆಯಾದ ಸುಹಾಸ್ ಶೆಟ್ಟಿ  ಕುಟುಂಬಕ್ಕೆ ಬಿಜೆಪಿಯಿಂದ ₹ 25 ಲಕ್ಷ ಪರಿಹಾರ ನೀಡುವುದಾಗಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ  ಘೋಷಣೆ ಮಾಡಿದ್ದಾರೆ.

ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಪಕ್ಷದ ಪರವಾಗಿ 25 ಲಕ್ಷ ಪರಿಹಾರ ನೀಡುವ ತೀರ್ಮಾನ ಮಾಡಿದ್ದೇವೆ. ಮುಖ್ಯಮಂತ್ರಿ, ಗೃಹಸಚಿವರು ಘಟನೆಯ ಗಂಭೀರತೆ ಅರ್ಥ ಮಾಡಿಕೊಳ್ಳಬೇಕು. ಸರ್ಕಾರದಿಂದ ಪರಿಹಾರ ನೀಡಬೇಕು. ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ನಡೆಸಬೇಕು ಎಂದು ಒತ್ತಾಯಿಸಿದರು.

ಪೆಹಲ್ಗಾಮ್ ಹತ್ಯೆ ಮರೆಯುವ ಮೊದಲೇ ಮಂಗಳೂರಿನಲ್ಲಿ ಘಟನೆ ನಡೆದಿರುವುದು ಖಂಡನಾರ್ಹ. ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಪೊಲೀಸ್ ಇಲಾಖೆ ವೈಫಲ್ಯ ಮೇಲ್ನೋಟಕ್ಕೆ ಕಂಡು ಬರ್ತಿದೆ. ಜೀವಕ್ಕೆ ರಕ್ಷಣೆ ನೀಡದಿರುವುದು ಪೊಲೀಸರ ವೈಫಲ್ಯ ಎಂದು ಮೃತ ಸುಹಾಸ್ ಶೆಟ್ಟಿ ಅಂತಿಮ ದರ್ಶನದ ಬಳಿಕ ಅವರು ಹೇಳಿದರು.

ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ ಕುಟುಂಬಕ್ಕೆ ಧೈರ್ಯ ಹೇಳುವ ಪ್ರಯತ್ನ ಮಾಡಿದ್ದೇವೆ. ಬಿಜೆಪಿಯ ಮುಖಂಡರು, ಕಾರ್ಯಕರ್ತರು ಅವರ ಕುಟುಂಬದ ಜೊತೆ ಇದ್ದೇವೆ. ಕುಟುಂಬದ ಆಧಾರ ಸ್ತಂಭ ಕಳಚಿ ಬಿದ್ದಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments