Select Your Language

Notifications

webdunia
webdunia
webdunia
webdunia

ಪಂಚಮಸಾಲಿ ಸಮಾಜದಲ್ಲಿ ಕ್ಷಮೆ ಯಾಚಿಸಿ, ದಬ್ಬಾಳಿಕೆ ಮಾಡಿದ ಅಧಿಕಾರಗಳ ವಿರುದ್ಧ ಕ್ರಮಕ್ಕೆ ವಿಜಯೇಂದ್ರ ಒತ್ತಾಯ

Panchamasali Society Protest, BJP Leader BY Vijayendra, Chief Minister Siddaramaiah,

Sampriya

ಬೆಂಗಳೂರು , ಗುರುವಾರ, 12 ಡಿಸೆಂಬರ್ 2024 (18:28 IST)
Photo Courtesy X
ಬೆಂಗಳೂರು: ಪ್ರಜಾಪ್ರಭುತ್ವದ ವ್ಯವಸ್ಥೆಯ ಮೇಲೆ ವಿಶ್ವಾಸವಿಲ್ಲವೆಂಬಂತೆ ನಡೆದುಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಹೋರಾಟಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಈ ಕೂಡಲೇ ಪಂಚಮಸಾಲಿ ಸಮಾಜದ ಕ್ಷಮೆ ಯಾಚಿಸಿ, ದಬ್ಬಾಳಿಕೆ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿರೋಧ ಪಕ್ಷದ ನಾಯಕ ಬಿವೈ ವಿಜಯೇಂದ್ರ ಆಗ್ರಹಿಸಿದರು.

ಚಳುವಳಿ ನಿರತ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಯೋಗಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸಲಾಯಿತು.

ಈ ವಿಚಾರವಾಗಿ ಬಿವೈ ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ಪಂಚಮಸಾಲಿ ಸಮುದಾಯದ 2ಎ ಪ್ರವರ್ಗದ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕುವ ದುರಾದ್ದೇಶದಿಂದ ಚಳುವಳಿ ನಿರತ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಯೋಗಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ಪ್ರಜಾಪ್ರಭುತ್ವದ ವ್ಯವಸ್ಥೆಯ ಮೇಲೆ ವಿಶ್ವಾಸವಿಲ್ಲವೆಂಬಂತೆ ನಡೆದುಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಹೋರಾಟಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಈ ಕೂಡಲೇ ಪಂಚಮಸಾಲಿ ಸಮಾಜದ ಕ್ಷಮೆ ಯಾಚಿಸಿ, ದಬ್ಬಾಳಿಕೆ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ವಿರೋಧ ಪಕ್ಷ ನಾಯಕರಾದ ಆರ್‌ ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ನಾರಾಯಣಸ್ವಾಮಿ ಛಲವಾದಿ
, ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಅಶ್ವಥ್ ನಾರಾಯಣ್, ಪಕ್ಷದ ಉಭಯ ಸದನಗಳ ಸದಸ್ಯರು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ದಿಢೀರನೆ ರಾಜ್ಯದ ಸಾಲದ ಬಗ್ಗೆ ಅಂಕಿಅಂಶ ನೀಡಿದ ಸಿಎಂ ಸಿದ್ದರಾಮಯ್ಯ