Webdunia - Bharat's app for daily news and videos

Install App

ಜನ್ ಧನ್, ಭಾಗ್ಯಲಕ್ಷ್ಮೀ ಯೋಜನೆಗಳನ್ನು ಕೇವಲ ಹಿಂದೂಗಳಿಗೆ ನೀಡುತ್ತಿಲ್ಲ: ವಿಜಯೇಂದ್ರ ಗಂಭೀರ ಆರೋಪ

Krishnaveni K
ಬುಧವಾರ, 19 ಮಾರ್ಚ್ 2025 (11:11 IST)
ಬೆಂಗಳೂರು: ಕೇಂದ್ರ ಸರಕಾರದ ನರೇಂದ್ರ ಮೋದಿಜೀ ಅವರ ಸರಕಾರ ನೀಡಿದ ಕಾರ್ಯಕ್ರಮಗಳು, ಜನ್‍ಧನ್ ಖಾತೆ, ಉಜ್ವಲ ಸೇರಿ ಅನೇಕ ಯೋಜನೆಗಳನ್ನು ಕೊಟ್ಟಿದ್ದು, ಅವನ್ನು ಕೇವಲ ಹಿಂದೂಗಳಿಗೆ ಕೊಟ್ಟಿಲ್ಲ. ಯಡಿಯೂರಪ್ಪ ಅವರ ಭಾಗ್ಯಲಕ್ಷ್ಮೀ ಯೋಜನೆ ಕೇವಲ ಹಿಂದೂಗಳಿಗೆ ಕೊಟ್ಟಿಲ್ಲ ಎಂದು ಗಮನ ಸೆಳೆದರು.

ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಈ ದೇಶದ ಪ್ರತಿಯೊಬ್ಬರಿಗೂ ಕೇಂದ್ರದ ಮೋದಿಜೀ ಅವರ ಸರಕಾರ ಕಾರ್ಯಕ್ರಮಗಳನ್ನು ನೀಡಿದೆ. ಬಿಜೆಪಿ, ಕಾಂಗ್ರೆಸ್ಸಿನವರ ಮಾದರಿಯಲ್ಲಿ ಮುಸಲ್ಮಾನರನ್ನು ಮತಬ್ಯಾಂಕಿಗೆ ಸೀಮಿತ ಮಾಡಿಲ್ಲ; ಮುಖ್ಯಮಂತ್ರಿಗಳೇ ನಿಮ್ಮ ತುಘಲಕ್ ದರ್ಬಾರಿಗೆ ಇತಿಮಿತಿ ಇದೆ. ಮುಸಲ್ಮಾನರಿಗೆ ಸರಕಾರಿ ಕಾಮಗಾರಿಗಳಲ್ಲಿ ಶೇ 4 ಮೀಸಲಾತಿಯನ್ನು ನಾವು ಸ್ಪಷ್ಟವಾಗಿ ವಿರೋಧ ಮಾಡುತ್ತೇವೆ ಎಂದು ಎಚ್ಚರಿಸಿದರು.

ರಾಜ್ಯದ ಕಾಂಗ್ರೆಸ್ ಸರಕಾರವು ಮುಸಲ್ಮಾನರಿಗೆ ಮೀಸಲಾತಿ ನೀಡುವ ಮಸೂದೆಯನ್ನು ನಿನ್ನೆ ಸದನದಲ್ಲಿ ಕದ್ದು ಮುಚ್ಚಿ ಮಂಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ವಿಪಕ್ಷದವರ ಕಣ್ತಪ್ಪಿಸಿ ಸದನದಲ್ಲಿ ಮಸೂದೆಯನ್ನು ಮಂಡಿಸಿದ್ದಾರೆ. ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ಬಿಜೆಪಿ, ಸಿದ್ದರಾಮಯ್ಯರ ನೇತೃತ್ವದ ಸರಕಾರದ ತುಘಲಕ್ ದರ್ಬಾರನ್ನು ಸ್ಪಷ್ಟವಾಗಿ ವಿರೋಧಿಸುತ್ತದೆ ಎಂದು ಪ್ರಕಟಿಸಿದರು. ಸದನದ ಒಳಗೆ ಮತ್ತು ಹೊರಗಡೆ ಬಿಜೆಪಿ ಇದನ್ನು ವಿರೋಧಿಸುತ್ತದೆ. ಅಗತ್ಯವಿದ್ದಲ್ಲಿ ರಾಜ್ಯ ಹೈಕೋರ್ಟಿನಲ್ಲೂ ಇದನ್ನು ಪ್ರಶ್ನಿಸುತ್ತೇವೆ ಎಂದು ತಿಳಿಸಿದರು.

ಇವರ ದುರಾಡಳಿತಕ್ಕೆ ಇತಿಮಿತಿ ಇದೆ. ಕಾಂಗ್ರೆಸ್ಸಿನವರು ಅಲ್ಪಸಂಖ್ಯಾತರ ಓಲೈಕೆ ರಾಜಕೀಯಕ್ಕೆ ಹೊರಟಿದ್ದಾರೆ. ಸಿದ್ದರಾಮಯ್ಯ, ಸರಕಾರಕ್ಕೆ ನಿಜವಾಗಿ ಅಲ್ಪಸಂಖ್ಯಾತರ ಬಗ್ಗೆ ಕಳಕಳಿ ಇದೆಯೇ ಎಂದು ಕೇಳಿದರು. ಸ್ವಾತಂತ್ರ್ಯ ಬಂದ ಬಳಿಕ ಸುಮಾರು 50-55 ವರ್ಷ ಸುದೀರ್ಘವಾಗಿ ಈ ದೇಶದಲ್ಲಿ, ರಾಜ್ಯದಲ್ಲಿ ಆಡಳಿತ ನಡೆಸಿದ್ದೀರಿ; ಅಲ್ಪಸಂಖ್ಯಾತರಿಗೆ ಶಿಕ್ಷಣಕ್ಕೆ ಒತ್ತು ಕೊಟ್ಟು ಅವರನ್ನು ಮುಂಚೂಣಿಯಲ್ಲಿ ತರುವ ಕೆಲಸವನ್ನು ಕಾಂಗ್ರೆಸ್ಸಿನವರು ಯಾಕೆ ಮಾಡಿಲ್ಲ ಎಂದು ಕೇಳಿದರು.

ಅಲ್ಪಸಂಖ್ಯಾತರಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಮುಂದಕ್ಕೆ ತರುವ ಇಚ್ಛಾಶಕ್ತಿ ಕಾಂಗ್ರೆಸ್ಸಿನವರಿಗೆ ಇರಲಿಲ್ಲ ಎಂದು ಟೀಕಿಸಿದರು. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎಂದು ಸಿದ್ದರಾಮಯ್ಯನವರು ಬಿಂಬಿಸಲು ಹೊರಟಿದ್ದಾರೆ. ಬಿಜೆಪಿ ಮುಸಲ್ಮಾನರ ವಿರೋಧಿಗಳಲ್ಲ. ಇಡೀ ದೇಶದಲ್ಲಿ ಅಲ್ಪಸಂಖ್ಯಾತ ಮಹಿಳೆಯರಿಗೆ ನ್ಯಾಯ ನೀಡಲು ತ್ರಿವಳಿ ತಲಾಖ್ ಅನ್ನು ಕಿತ್ತು ಹಾಕಿದ್ದು, ಬಿಜೆಪಿಯ ನರೇಂದ್ರ ಮೋದಿಜೀ ಅವರ ಸರಕಾರ ಎಂದು ವಿವರಿಸಿದರು.

ಸದನದ ಒಳಗೆ ಮತ್ತು ಹೊರಗಡೆ ಹೋರಾಟದ ರೂಪುರೇಷೆ ಸಂಬಂಧ ಮುಖಂಡರು ಕುಳಿತು ಚರ್ಚೆ ಮಾಡುತ್ತೇವೆ. ಬಳಿಕ ತೀರ್ಮಾನ ಮಾಡುತ್ತೇವೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಭಾರತೀಯ ಸೇನಾ ದಾಳಿಗೆ ಆಪರೇಷನ್ ಸಿಂದೂರ್ ಎಂದೇ ಹೆಸರಿಟ್ಟಿದ್ದೇಕೆ ಇಲ್ಲಿದೆ ಕಾರಣ

Operation Sindoor: ಮೋದಿಗೆ ಹೇಳಿ ಎಂದಿದ್ದಕ್ಕೆ ತಕ್ಕ ಉತ್ತರ ಕೊಟ್ಟ ಮೋದಿ

India Pakistan Operation Sindoor: ಭಾರತ ದಾಳಿ ನಡೆಸಿದ 9 ಸ್ಥಳಗಳು ಯಾವುದೆಲ್ಲಾ

India Pakistan Operation Sindoor: ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ, 9 ಕಡೆ ದಾಳಿ Video

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಮುಂದಿನ ಸುದ್ದಿ
Show comments