Select Your Language

Notifications

webdunia
webdunia
webdunia
webdunia

ನಾವು ಪಕ್ಷ ಕಟ್ಟಿದಾಗ ವಿಜಯೇಂದ್ರ ಇನ್ನೂ ಕಣ್ಣು ಬಿಟ್ಟಿರಲಿಲ್ಲ: ಈಶ್ವರಪ್ಪ ಆಕ್ರೋಶ

BJP President BY Vijayendra, EX DCM Eshwarappa, EX CM BS Yediyurappa

Sampriya

ಹುಬ್ಬಳ್ಳಿ , ಸೋಮವಾರ, 7 ಅಕ್ಟೋಬರ್ 2024 (17:55 IST)
Photo Courtesy X
ಹುಬ್ಬಳ್ಳಿ: ವಿಜಯೇಂದ್ರ ಬಿಜೆಪಿ ಕಂಡಿದ್ದು ಯಾವಾಗ, ಅನಂತಕುಮಾರ್, ಯಡಿಯೂರಪ್ಪ, ಸೇರಿದಂತೆ ಹಲವು ನಾಯಕರ ನೇತೃತ್ವದಲ್ಲಿ ಪಕ್ಷ ನಾವು ಪಕ್ಷ ಕಟ್ಟಿದೇವು. ಆಗಾ ವಿಜಯೇಂದ್ರ ಕಣ್ಣು ಬಿಟ್ಟಿರಲಿಲ್ಲ ಎಂದು ಬಿಎಸ್‌ವೈ ಪುತ್ರನ ವಿರುದ್ಧ ಈಶ್ವರಪ್ಪ ಮತ್ತೇ ಕಿಡಿಕಾರಿದರು.

ಹಿಂದೂಳಿದ, ದಲಿತ ಸೇರಿದಂತೆ ಎಲ್ಲ ಸಮಾಜದವರ ಒಟ್ಟಾಗಿಸಲು ಕೆಎಸ್ ಈಶ್ವರಪ್ಪ ಅವರು ಆರ್‌ಸಿಬಿ (ರಾಯಣ್ಣ ಚೆನ್ನಮ್ಮ ಬ್ರಿಗೇಡ್) ಸಂಘಟನೆ ಮಾಡುತ್ತಿದ್ದಾರೆ. ಈ  ಬೆಳವಣಿಗೆ ಬೆನ್ನಲ್ಲೇ ವಿಜಯೇಂದ್ರ ವಿರುದ್ಧ ಈಶ್ವರಪ್ಪ ಆಕ್ರೋಶ ಹೊರಹಾಕಿದ್ದಾರೆ.

ಅ.20 ರಂದು ಆರ್‌ಸಿಬಿ ಸಭೆ:  ಹಿಂದೂಳಿದ, ದಲಿತ ಸೇರಿದಂತೆ ಎಲ್ಲ ಸಮಾಜದವರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯಾಗಲು ಸಾಧು ಸಂತರ ನೇತೃತ್ವದಲ್ಲಿ ರಾಯಣ್ಣ, ಚೆನ್ನಮ್ಮ ಬ್ರಿಗೇಡ್ ಸಂಘಟನೆಯನ್ನು ಹುಟ್ಟುಹಾಕಲು ಚಿಂತಿಸಿದ್ದು, ಅ.20 ರಂದು ಬಾಗಲಕೋಟೆಯಲ್ಲಿ ಸಭೆ ನಡೆಸಲು ಚಿಂತಿಸಲಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.

ವಿಜಯೇಂದ್ರ ಎಳಸು

ಠೇವಣಿ ಕಳೆದುಕೊಂಡವರು ಸಂಘಟನೆ ಕಟ್ಟುತ್ತಿದ್ದಾರೆ ಎಂಬ ವಿಜಯೇಂದ್ರ ಹೇಳಿಕೆಗೆ ಕಿಡಿಕಾರಿರುವ ಈಶ್ವರಪ್ಪ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ರಾಜಕೀಯದಲ್ಲಿ ಇನ್ನು ಎಳಸು. ನಾವೆಲ್ಲರೂ ಪಕ್ಷ ಕಟ್ಟಿದಾಗ ವಿಜಯೇಂದ್ರ ಇನ್ನೂ ಕಣ್ಣು ಬಿಟ್ಟಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯನ್ನು ಅನೇಕರು ಶ್ರಮವಹಿಸಿ ಕಟ್ಟಿದ ಮೇಲೆ ಮೋದಿ, ಅಮಿತ್ ಷಾ ಕೃಪಕಟಾಕ್ಷದಿಂದ, ಹೈಕಮಾಂಡ್ ಗೆ ಮಂಕುಬೂದಿ ಎರಚಿ ರಾಜ್ಯಾಧ್ಯಕ್ಷರಾಗಿದ್ದಾರೆ‌. ವಿಜಯೇಂದ್ರ ಕೈಯಲ್ಲಿ ಇದೀಗ ಪಕ್ಷ ಇವರ ಕೈಯಲ್ಲಿ ಸಿಕ್ಕು ಹಾಳಾಗುತ್ತಿದೆ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಮುಡಾ ಹಗರಣ ಮುಚ್ಚಿ ಹಾಕಲು ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತರುತ್ತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಜಾತಿಗಣತಿ ವರದಿಯನ್ನು ಬಹಿರಂಗಪಡಿಸುವುದಾಗಿ ಹೇಳಿದ್ದರು. ಈ ಮಾತು ಹೇಳಿ ಎಂಟು ವರ್ಷ ಕಳೆದರೂ ಕಾರ್ಯರೂಪಕ್ಕೆ ಬಂದಿಲ್ಲ. ಇದೀಗ ಅಲುಗಾಡುತ್ತಿರುವ ಸಿಎಂ ಕುರ್ಚಿ ಉಳಿಸಿಕೊಳ್ಳಲು ತಮ್ಮ ಪಕ್ಷದ ಶಾಸಕರ, ಸಚಿವರ ಮೂಲಕ ಜಾತಿಗಣತಿ ವಿಷಯವನ್ನು ಮುನ್ನಲೆಗೆ ತರುತ್ತಿದ್ದಾರೆ ಎಂದು ಆರೋಪಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬನ್ನೇರುಘಟ್ಟ ಸಫಾರಿ ವೇಳೆ ಬಸ್‌ ಏರಿದ ಚಿರತೆ