Webdunia - Bharat's app for daily news and videos

Install App

ಯಡಿಯೂರಪ್ಪ ಕಾಲಿನ ಧೂಳಿಗೂ ವಿಜಯೇಂದ್ರ ಸಮನಲ್ಲ: ರಮೇಶ ಜಾರಕಿಹೊಳಿ

Sampriya
ಸೋಮವಾರ, 2 ಡಿಸೆಂಬರ್ 2024 (18:46 IST)
Photo Courtesy X
ಬೆಳಗಾವಿ: ತನಗೆ ಬೆಂಬಲ ಸೂಚಿಸುವಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಹಿಂದುಳಿದ ಹಾಗೂ ಪರಿಶಿಷ್ಟ ನಾಯಕರಿಗೆ ಬೆದರಿಕೆ ಹಾಕಿದ್ದಾರೆ. ಅವರ ಜೊತೆಯಲ್ಲಿರುವ ಬಹುತೇಕರು ಹಿಂದುಳಿದ‌ ಸಮುದಾಯದವರೇ ಹೊರತು; ಲಿಂಗಾಯತ, ಒಕ್ಕಲಿಗರು ಯಾರೂ ಇಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಆಗ್ರಹಿಸಿದರು.

ಬೆಳಗಾವಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಟ್ಟು ಹೋರಾಟಗಾರರಾಗಿರುವ ಬಿ.ಎಸ್.ಯಡಿಯೂರಪ್ಪ ಅವರ ಕಾಲಿನ ಧೂಳಿಗೂ ವಿಜಯೇಂದ್ರ ಸಮನಲ್ಲ. ಜೀನ್ಸ್ ಪ್ಯಾಂಟು- ಟೀ ಶರ್ಟು ಹಾಕಿಕೊಂಡು ಓಡಾಡುವ ವಯಸ್ಸು ಅವರದ್ದು. ಪಾಪ ಅವರಿಗೆ ರಾಜಕೀಯ ಗೊತ್ತಿಲ್ಲ. ಉತ್ತಮ ಭವಿಷ್ಯವಿದೆ. ಈಗ ಪದವಿ ತ್ಯಾಗ ಮಾಡಲಿ ಎಂದು ಹೇಳಿದರು.

ಬಿಜೆಪಿಯ ಶೇ 70ರಷ್ಟು ಶಾಸಕರು ನನ್ನ ಸ್ನೇಹಿತರಾಗಿದ್ದಾರೆ. ಆದರೆ, ಮುಕ್ತವಾಗಿ ನಿಲುವು ಪ್ರಕಟಿಸಲು ಅವರಿಗೆ ಆಗುತ್ತಿಲ್ಲ. ಹಿಂದೆ ಸರಿಯಿರಿ ಎಂದು ಎಲ್ಲ ಶಾಸಕರು ನಮಗೆ ಹೇಳಿದರು ನಾವೂ ಹಿಂದೆ ಸರಿಯುತ್ತೇವೆ ಎಂದೂ ಪ್ರತಿಕ್ರಿಯಿಸಿದರು.

ರೇಣುಕಾಚಾರ್ಯಗೆ ಬೇರೆ ದಾರಿ ಇಲ್ಲ. ತಮ್ಮ ರಾಜಕೀಯ ‌ಅಸ್ತಿತ್ವಕ್ಕಾಗಿ ವಿಜಯೇಂದ್ರ ಜೊತೆಗಿದ್ದಾರೆ ಅಷ್ಟೇ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆದ ಪೊಲೀಸರು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments