Publish Date: Mon, 14 Jan 2019 (17:30 IST)
Updated Date: Mon, 14 Jan 2019 (17:32 IST)
ರಾಜ್ಯ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆಗಳು ನಡೆಯುತ್ತಿರುವ ಸಮಯದಲ್ಲಿಯೇ ಬಿಜೆಪಿಯ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.
ಜೆಡಿಎಸ್-ಕಾಂಗ್ರೆಸ್ ಶಾಸಕರು ಆಡಳಿತದಲ್ಲಿ ವಿಶ್ವಾಸ ಕಳೆದುಕೊಳ್ಳುವ ಭಾವನೆ ಇದೆ. ನಾವು ಬೇರೆ ಪಕ್ಷದ ಶಾಸಕರನ್ನ ಸಂಪರ್ಕ ಮಾಡುತ್ತಿಲ್ಲ ಎಂದಿದ್ದಾರೆ.
ಕಾರ್ಯಕಾರಣಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ದೆಹಲಿಯಲ್ಲಿದ್ದಾರೆ. ಅದನ್ನ ಹೊರತಾಗಿ ಬೇರೆ ಯಾವುದೇ ಕಾರಣಕ್ಕೂ ದೆಹಲಿಗೆ ಹೋಗಿಲ್ಲ ಎಂದ ಅವರು, ನನಗೆ ಇರುವ ಮಾಹಿತಿ ಪ್ರಕಾರ ಯಾವುದೇ ಶಾಸಕರು ನಮ್ಮಪಕ್ಷದ ನಾಯಕರ ಸಂಪರ್ಕದಲ್ಲಿ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಸಿದ್ದಗಂಗಾ ಶ್ರೀಗಳ ಭೇಟಿ ಬಳಿಕ ಸಿದ್ದಗಂಗಾ ಆಸ್ಪತ್ರೆಯಲ್ಲಿ ವಿಜಯೇಂದ್ರ ಹೇಳಿಕೆ ನೀಡಿದ್ದು, ಶ್ರೀಗಳ ಆರೋಗ್ಯದಲ್ಲಿ ನಿಧಾನವಾಗಿ ಚೇತರಿಕೆ ಆಗುತ್ತಿದೆ. ಅವರ ಆರೋಗ್ಯ ಶೀಘ್ರ ಚೇತರಿಕೆ ಆಗುತ್ತದೆ ಎನ್ನುವ ವಿಶ್ವಾಸ ಇದೆ. ಶ್ರೀಗಳ ಆರೋಗ್ಯ ಸುಧಾರಣೆ ಆಗುತ್ತಿದೆ ಎಂದು ವೈದ್ಯರು ಸಹ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.