Webdunia - Bharat's app for daily news and videos

Install App

ಶ್ರಮಿಕರ ಕಲ್ಯಾಣಕ್ಕಾಗಿ ಬಿಜೆಪಿಯಿಂದ ಹಲವು ಯೋಜನೆ ಅನುಷ್ಠಾನ: ವಿಜಯೇಂದ್ರ

ಕೃಷ್ಣವೇಣಿ ಕೆ
ಶುಕ್ರವಾರ, 1 ಮೇ 2026 (16:34 IST)
ಬೆಂಗಳೂರು: ದೇಶ ಅಭಿವೃದ್ಧಿಯ ಪಥದಲ್ಲಿ ಸಾಗಲು ಮಹತ್ವದ ಕೊಡುಗೆ ನೀಡುತ್ತಿರುವ ಶ್ರಮಿಕ ವರ್ಗದ ಕಲ್ಯಾಣಕ್ಕಾಗಿ ಕೇಂದ್ರದ ಬಿಜೆಪಿ ಸರ್ಕಾರ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೂ ಕಾರ್ಮಿಕರ ಅನುಕೂಲಕ್ಕಾಗಿ ಸಾಕಷ್ಟು ನೆರವು ನೀಡಲಾಗಿತ್ತು ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಹೇಳಿದರು. 
 
ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ ಬಿಜೆಪಿ ರಾಜ್ಯ ಕಾರ್ಯಾಲಯ ʼಜಗನ್ನಾಥ ಭವನʼದಲ್ಲಿ ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಟದ ವತಿಯಿಂದ ಹಮ್ಮಿಕೊಂಡಿದ್ದ ʼಶ್ರಮಿಕ ದಿವಸ್ʼ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 
 
ದೇಶ ಹಾಗೂ ಸಮಾಜಕ್ಕೆ ಶ್ರಮಿಕವರ್ಗ ನೀಡುತ್ತಿರುವ ಕೊಡುಗೆಯನ್ನು ಎಂದಿಗೂ ಮರೆಯಲಾಗದು. 2047 ನೇ ಇಸವಿಗೆ ಭಾರತ ಅಭಿವೃದ್ಧಿಶೀಲ ರಾಷ್ಟ್ರವಾಗಿ ಪರಿವರ್ತನೆ ಮಾಡಲು ಶ್ರಮಿಕದ ಪಾತ್ರ ದೊಡ್ಡದು. ಕಾರ್ಮಿಕರು ಇಲ್ಲದೇ ದೇಶ ನಿರ್ಮಾಣವನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ನರೇಂದ್ರ ಮೋದಿ ಅವರು 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ಕಾರ್ಮಿಕ ವರ್ಗಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಅನುಷ್ಠಾನಕ್ಕೆ ತಂದರು. ಇ- ಶ್ರಮ್ ಪೆÇೀರ್ಟಲ್ ಅನ್ನು ಆರಂಭಿಸಿ ಅಸಂಘಟಿತ ಕಾರ್ಮಿಕರ ಅಂಕಿ ಅಂಶ ಪಡೆದು ಅವರಿಗೆ ಪಿಂಚಣಿ, ಆರೋಗ್ಯ ಸೇರಿದಂತೆ ಹಲವು ರೀತಿಯ ಸಹಾಯ ಮಾಡಿದರು ಎಂದು ವಿವರಿಸಿದರು. 

ಇಡೀ ವಿಶ್ವವನ್ನೇ ನಲುಗಿಸಿದ ಕೋವಿಡ್ ವೇಳೆ ಕಾರ್ಮಿಕರು ಯಾವ ರೀತಿ ತೊಂದರೆಗೆ ಸಿಲುಕಿದ್ದರು ಎಂಬುದನ್ನು ನೋಡಿದ್ದೇವೆ. ಅಂದು ದೇಶದಾದ್ಯಂತ ಪ್ರಧಾನಿ ಮೋದಿ ಅವರು ಶ್ರಮಿಕರಿಗೆ ಎಲ್ಲಾ ರೀತಿಯ ಅನುಕೂಲಗಳನ್ನು ಮಾಡಿದರು. ರಾಜ್ಯದಲ್ಲಿ ಆಗ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರ ಸಹ ಕಾರ್ಮಿಕರ ನೆರವಿಗೆ ನಿಂತಿತ್ತು ಎಂದು ನೆನಪಿಸಿದರು. 

ಕೋವಿಡ್ ವೇಳೆ ದೇಶದ ಮೂಲೆಮೂಲೆಗಳಿಂದ ರಾಜ್ಯಕ್ಕೆ ಕೆಲಸಕ್ಕಾಗಿ ಬಂದಿದ್ದ ಕಾರ್ಮಿಕರು ಸಾಕಷ್ಟು ತೊಂದರೆಗೆ ಸಿಲುಕಿದ್ದರು. ತುತ್ತು ಅನ್ನವೂ ಸಿಗದೆ ಬೀದಿಗೆ ಬಿದ್ದಂತೆ ಆಗಿದ್ದರು. ಆಗ ಬಿ ಎಸ್ ಯಡಿಯೂರಪ್ಪ ಅವರು ಇಂತಹ ಕಾರ್ಮಿಕರಿಗೆ ಪ್ಯಾಕೇಜ್ ಘೋಷಣೆ ಮಾಡಿದರು. ರಾತ್ರೋ ರಾತ್ರಿ ಲಾಕ್‍ಡೌನ್ ಆಗಿದ್ದಾಗ ಎಲ್ಲಿಗೆ ಹೋಗಬೇಕು ಎಂದು ದಿಕ್ಕೆಟ್ಟ ಕಾರ್ಮಿಕರಿಗೆ ಸರ್ಕಾರ ಅನುಕೂಲ ಮಾಡಿಕೊಟ್ಟಿತ್ತು. ಕ್ಲಿಷ್ಟಕರ ಸಂದರ್ಭದಲ್ಲೂ ಶ್ರಮಿಕ ವರ್ಗವನ್ನು ಮೋದಿ ಹಾಗೂ ಬಿ.ಎಸ್ ಯಡಿಯೂರಪ್ಪ ಅವರು ನಿರ್ಲಕ್ಷಿಸಲಿಲ್ಲ. ಕಾರ್ಮಿಕರ ಜೊತೆ ನಿಂತು ಧೈರ್ಯ ಹೇಳಿದರು ಎಂದರು. 

ಇತ್ತೀಚೆಗೆ ಕೇಂದ್ರ ಸರ್ಕಾರವು 29 ಹಳೆಯ ಕಾರ್ಮಿಕ ಕಾನೂನುಗಳನ್ನು ಸರಳೀಕರಿಸಿ 4 ಹೊಸ ಕಾರ್ಮಿಕ ಸಂಹಿತೆಗಳನ್ನು ರೂಪಿಸಿತು. ಇದರಿಂದ ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದೆ. ಎನ್‍ಡಿಎ ಸರ್ಕಾರದ ಈ ನಿರ್ಧಾರ ಮಹತ್ವದಾಗಿದೆ ಎಂದು ಹೇಳಿದರು. 

ದೇಶದ ಅಭಿವೃದ್ಧಿಗೆ ಎಲ್ಲ ವರ್ಗದ ಶ್ರಮಿಕರ ಕೊಡುಗೆ ಇದೆ ಎಂಬುದನ್ನು ಅರಿತಿರುವ ಕೇಂದ್ರ ಸರ್ಕಾರ, ವಿಶ್ವಕರ್ಮ ಯೋಜನೆ ಅನುμÁ್ಠನ ಮಾಡಿತು. ಅವರ ಶ್ರಮಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಬಿಜೆಪಿ ಸರ್ಕಾರ ಮಾಡುತ್ತಿದೆ. ಸರ್ಕಾರ ಜಾರಿ ಮಾಡಿದ ಸುಧಾರಣೆಗಳನ್ನು, ಕಲ್ಯಾಣ ಯೋಜನೆಗಳನ್ನು ಶ್ರಮಿಕರಿಗೆ ತಲುಪಿಸುವ ಕೆಲಸ ಮಾಡೋಣ ಎಂದು ಕರೆ ನೀಡಿದರು. 
 
 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments