Daily Horoscope

Select Your Language

Notifications

webdunia
webdunia
webdunia
webdunia

ರಾಜ್ಯಾಧ್ಯಕ್ಷನಾಗಿ ಸಿಎಂ ವಿರುದ್ಧ ತೊಡೆ ತಟ್ಟಿ ಪಾದಯಾತ್ರೆ ಮಾಡಿದವನು ನಾನು: ವಿಜಯೇಂದ್ರ

BY Vijayendra
ಬೆಳಗಾವಿ: ರಾಜ್ಯಾಧ್ಯಕ್ಷನಾಗಿ ಮುಖ್ಯಮಂತ್ರಿಗಳ ವಿರುದ್ಧ ತೊಡೆ ತಟ್ಟಿ, ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿದ್ದೇನೆ ಎಂದು ಬಿವೈ ವಿಜಯೇಂದ್ರ ಇಂದು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.

ಯಾವುದೇ ತಪ್ಪಿತಸ್ಥ ಸಚಿವರನ್ನು ಬೀದಿಗೆಳೆಯುವ ಕೆಲಸ ಮಾಡುತ್ತೇವೆ. ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಬೀದಿಗೆಳೆಯುವ ಕೆಲಸ ಮಾಡುತ್ತಿದ್ದೇನೆ ಎಂದು ಅವರು ತಿಳಿಸಿದರು.

ಸರಕಾರದ ವೈಫಲ್ಯಗಳ ಬಗ್ಗೆ ಈಗಾಗಲೇ ನಾವು ಜನಜಾಗೃತಿ ಮೂಡಿಸುತ್ತಿದ್ದೇವೆ. ಇನ್ನೂ ಹೆಚ್ಚು ಮಾಡುವ ಕುರಿತು ಕಾರ್ಯೋನ್ಮುಖರಾಗುವ ಬಗ್ಗೆ ಚರ್ಚೆ ಮಾಡಿ ಅನುಷ್ಠಾನಕ್ಕೆ ತರುತ್ತೇವೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ವಿಪಕ್ಷವಾಗಿ ಈ ನಾಲಾಯಕ್ ಸರಕಾರದ ಕಿವಿ ಹಿಂಡುವ ಕೆಲಸ ಆಗಬೇಕಿದೆ. ಭ್ರಷ್ಟಾಚಾರದ ಕುರಿತು ಜನಜಾಗೃತಿ ಮೂಡಿಸಲು ನಾನು ನಮ್ಮೆಲ್ಲ ಮುಖಂಡರ ಜೊತೆ ರಾಜ್ಯ ಪ್ರವಾಸ ಮಾಡುವುದಾಗಿ ಅವರು ಹೇಳಿದರು.

ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ರಾಜ್ಯದ ಹಿತಾಸಕ್ತಿಯನ್ನು ಬಲಿ ಕೊಡುತ್ತಿದ್ದಾರೆ. ನುಡಿದಂತೆ ನಡೆದ ಸರಕಾರ ಎಂದು ಹೇಳಿಕೊಂಡು ಈ ರಾಜ್ಯದ ಗೌರವ ಹಾಳು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಏನೂ ಅಭಿವೃದ್ಧಿ ನಡೆಯುತ್ತಿಲ್ಲ ಎಂದು ತಿಳಿಸಿದರು. ಶಾಸಕರ ವಿದೇಶ ಪ್ರವಾಸ ಕುರಿತ ಪ್ರಶ್ನೆಗೆ ಉತ್ತರಿಸಿ, ಈ ಸರಕಾರ, ಮುಖ್ಯಮಂತ್ರಿಗಳ ಆದ್ಯತೆ ಏನೆಂದು ಇದರಿಂದ ಗೊತ್ತಾಗುತ್ತದೆ. ಶಾಸಕರು ಅನುದಾನ ಕೇಳಿದರೆ ವಿದೇಶ ಪ್ರವಾಸದ ಭಾಗ್ಯ ನೀಡಲು ಮುಖ್ಯಮಂತ್ರಿಗಳು ಹೊರಟಿದ್ದಾರೆ ಎಂದು ಟೀಕಿಸಿದರು. ಮುಖ್ಯಮಂತ್ರಿಗಳು ಕುರ್ಚಿ ಉಳಿಸಿಕೊಳ್ಳಲು ವಿದೇಶ ಪ್ರವಾಸಕ್ಕೆ ಕಳುಹಿಸಲು ಪ್ರಾರಂಭಿಸಿದ್ದಾರೆ ಎಂದು ನುಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ