Select Your Language

Notifications

webdunia
webdunia
webdunia
webdunia

ರಾಜ್ಯ ಸರ್ಕಾರದ ದೋಖಾ ಜನರಿಗೆ ತಿಳಿಸಲು ಜನಾಕ್ರೋಶ ಯಾತ್ರೆ: ವಿಜಯೇಂದ್ರ

BY Vijayendra

Krishnaveni K

ಬೆಂಗಳೂರು , ಸೋಮವಾರ, 7 ಏಪ್ರಿಲ್ 2025 (12:17 IST)
ಬೆಂಗಳೂರು: ಮೈಸೂರಿನಲ್ಲಿ ಇವತ್ತು ಮಧ್ಯಾಹ್ನ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ 3 ಗಂಟೆ ನಂತರ ಭ್ರಷ್ಟ- ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ ಯಾತ್ರೆಗೆ ಕೇಂದ್ರದ ಸಚಿವ ಪ್ರಲ್ಹಾದ್ ಜೋಶಿ ಅವರು ಚಾಲನೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ  ಅವರು ತಿಳಿಸಿದ್ದಾರೆ.

ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯಾತ್ರೆಯಲ್ಲಿ ನಮ್ಮ ಪಕ್ಷದ ಎಲ್ಲ ಹಿರಿಯ ಮುಖಂಡರು ಭಾಗವಹಿಸುತ್ತಾರೆ. ಜನಾಕ್ರೋಶ ಯಾತ್ರೆ 4 ಹಂತಗಳಲ್ಲಿ ನಡೆಯಲಿದೆ. ಇವತ್ತು ಮೈಸೂರು, ನಾಳೆ ಮಂಡ್ಯ, ಹಾಸನ, ನಾಡಿದ್ದು ಮಡಿಕೇರಿ, ಮಂಗಳೂರು- ಹೀಗೆ ಪ್ರತಿ ಜಿಲ್ಲಾ ಕೇಂದ್ರಗಳಿಗೆ ನಮ್ಮ ಜನಾಕ್ರೋಶ ಯಾತ್ರೆ ತೆರಳುತ್ತದೆ ಎಂದರು.

ಅಯೋಗ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, ಮುಸ್ಲಿಮರಿಗೆ ಸರಕಾರಿ ಕಾಮಗಾರಿಗಳಲ್ಲಿ ಮೀಸಲಾತಿ, ದಲಿತರ ಅಭ್ಯುದಯಕ್ಕೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಹಣದ ವಿಚಾರದಲ್ಲಿ ದೋಖಾ ಸೇರಿ ಜನವಿರೋಧಿ ನೀತಿಯನ್ನು ರಾಜ್ಯದ ಜನರಿಗೆ ತಿಳಿಸುತ್ತೇವೆ ಎಂದು ವಿವರಿಸಿದರು.

ಬಿಜೆಪಿ- ಜೆಡಿಎಸ್ ಮಧ್ಯೆ ಒಡಕಿಲ್ಲ. ಇದು ನಮ್ಮ ಪಕ್ಷದ ಹೋರಾಟ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ನಮ್ಮ ಹೋರಾಟಕ್ಕೆ ಆಡಳಿತ ಪಕ್ಷದವರು ಗೌರವ ಕೊಡಬೇಕೆಂದು ನಿರೀಕ್ಷೆ ಮಾಡುವ ದಡ್ಡರು ನಾವಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಅಸ್ತಿತ್ವದ ಪ್ರಶ್ನೆ ಕಾಡುತ್ತಿದೆ. ಬಿಜೆಪಿ ಈಗ ವಿಶ್ವದ ಅತಿ ದೊಡ್ಡ ಪಕ್ಷವೆನಿಸಿದೆ. ದೇಶದಲ್ಲಿ 400ಕ್ಕೂ ಹೆಚ್ಚು ಸಂಸದರಿದ್ದ ಕಾಂಗ್ರೆಸ್ ಪಕ್ಷಕ್ಕೆ ಇವತ್ತು ಎಂಥ ಪರಿಸ್ಥಿತಿ ಬಂದಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಬಿಜೆಪಿಗೆ ಅಸ್ತಿತ್ವದ ಪ್ರಶ್ನೆ ಕಾಡುತ್ತಿಲ್ಲ. ಬಿಜೆಪಿ ಸುಭದ್ರವಾಗಿದೆ ಎಂದು ನುಡಿದರು.
 
 
 

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ನಡೆದಾಡುತ್ತಿದ್ದ ಯುವತಿಯನ್ನು ತಬ್ಬಿ ಮಾಡಬಾರದ್ದನ್ನು ಮಾಡಿದ ಯುವಕ: ವಿಡಿಯೋ