Publish Date: Thu, 16 Nov 2023 (18:03 IST)
Updated Date: Thu, 16 Nov 2023 (18:11 IST)
ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಬೆಂಗಾವಲಾಗಿ ಕೆಲಸ ಮಾಡುತ್ತೇನೆ ಎಂದು ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದ ಬಳಿಕ ಮಾತನಾಡಿದ ಅವರು, ನಾಲ್ಕು ವರ್ಷಗಳ ಕಾಲ ಪಕ್ಷವನ್ನು ಯಶಸ್ವಿಯಾಗಿ ನಿಭಾಯಿಸಿದ ಸಮಾಧಾನ ನನಗಿದೆ. ವಿಜಯೇಂದ್ರ ನೇತೃತ್ವದ ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನಗಳನ್ನು ಗೆಲ್ಲುವ ದೃಷ್ಟಿಯಿಂದ ಕೆಲಸ ಮಾಡುತ್ತೇವೆ ಎಂದ್ರು.