Select Your Language

Notifications

webdunia
webdunia
webdunia
webdunia

ಶಿಷ್ಯೆ ಜೊತೆ 'ಹಳ್ಳಿ ಮೇಷ್ಟ್ರ' ರೊಮ್ಯಾನ್ಸ್

ಶಿಷ್ಯೆ ಜೊತೆ 'ಹಳ್ಳಿ ಮೇಷ್ಟ್ರ' ರೊಮ್ಯಾನ್ಸ್
mysooru , ಭಾನುವಾರ, 30 ಜನವರಿ 2022 (20:52 IST)
ಶಾಲೆಯಲ್ಲೇ ವಿದ್ಯಾರ್ಥಿನಿ ಜೊತೆಗೆ ಪಾಠ ಹೇಳಿಕೊಡಬೇಕಾದ ಮುಖ್ಯ ಶಿಕ್ಷಕ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ‌ ಆಗಿತ್ತು , ಪೋಲಿ ಶಿಕ್ಷಕನ ವರ್ತನೆಗೆ ವ್ಯಾಪಕ ಅಕ್ರೋಶ ವ್ಯಕ್ತವಾಗಿತ್ತು.
ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಶಾಲೆಯೊಂದರಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಜೊತೆಗೆ ರಾಸಲೀಲೆಯಲ್ಲಿ ನಿರತನಾಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ವಿಡಿಯೋವನ್ನು ಶಾಲೆಯ ಹಿರಿಯ ವಿದ್ಯಾರ್ಥಿಗಳೇ ಹರಿ ಬಿಟ್ಟಿದ್ದಾರೆ ಎನ್ನಲಾಗಿತ್ತು.
ಇದೀಗ ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದ ಮುಖ್ಯ ಶಿಕ್ಷಕನನ್ನು ಸೇವೆಯಿಂದ ವಜಾ ಮಾಡಲಾಗಿದೆ. ಘಟನೆ ಸಂಬಂಧ ಶಿಕ್ಷಣಾಧಿಕಾರಿ ಅವರು ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯದ ಕುರಿತು ಮುಖ್ಯೋಪಾಧ್ಯಾಯರ ಮೇಲೆ ದೂರು ದಾಖಲಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಹೆಚ್.ಡಿ ಕೋಟೆ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನನ್ವಯ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡು ಪರಿಶೀಲನೆ ನಡೆಸುತ್ತಿದ್ದು, . ಆರೋಪಿ ಶಿಕ್ಷಕನನ್ನು ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಂಡ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಒಟ್ಟಾರೆ ಮಕ್ಕಳಿಗೆ ತಿಳುವಳಿಕೆ ಹೇಳಿ ಮಕ್ಕಳನ್ನು ತಿದ್ದಿ ಸರಿ ದಾರಿಗೆ ತರಬೇಕಾಗಿರುವ ಶಿಕ್ಷಕರೇ ಇಂತಹ ಕೃತ್ಯ ಎಸಗಿದ್ದು, ನಿಜಕ್ಕೂ ನಾಚಿಕೆಗೇಡು.

Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ದಿನದಲ್ಲಿ 2,34,281 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ