Publish Date: Fri, 14 Sep 2018 (16:46 IST)
Updated Date: Fri, 14 Sep 2018 (16:48 IST)
ಕುಡಿಯುವ ನೀರಿಗಾಗಿ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಜನರು ಪ್ರತಿಭಟನೆ ಮಾಡಿದ್ದಾರೆ.
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಹಾಲಿಂಗಪುರ ಗ್ರಾಮಸ್ಥರು ಕುಡಿಯುವ ನೀರು ಸಮರ್ಪಕ ಪೂರೈಕೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಸೊರಟೂರು ಗ್ರಾಮ ಪಂಚಾಯತಿ ಮುಂದೆ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದ ನೂರಾರು ಮಹಿಳೆಯರು ಗ್ರಾಮ ಪಂಚಾಯತಿ ಕಚೇರಿಗೆ ಮುತ್ತಿಗೆ ಹಾಕಿದರು.
ಮಹಾಲಿಂಗಪುರದ ಸೊರಟೂರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡಲಿದ್ದು, ಕುಡಿಯುವ ನೀರಿನ ಸಮಸ್ಯೆಯನ್ನು ಜನರು ಎದುರಿಸುತ್ತಿದ್ದಾರೆ. ಪ್ರತಿಭಟನೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲಿಸ್ ಸಿಬ್ಬಂದಿ ದೌಡಾಯಿಸಿದ್ದಾರೆ. ಪ್ರತಿಭಟನಾಕಾರರನ್ನ ಮನವೊಲಿಸುವಲ್ಲಿ ಪ್ರಯತ್ನ ನಡೆಸಿದ್ದಾರೆ.