Select Your Language

Notifications

webdunia
webdunia
webdunia
webdunia

ವಿನಯ್ ಸೋಮಯ್ಯ ಆತ್ಮಹತ್ಯೆ: ಸೂಕ್ತ ತನಿಖೆಗೆ ವಿಜಯೇಂದ್ರ ಆಗ್ರಹ

Vinya Somaiah Suicide Case

Sampriya

ಬೆಂಗಳೂರು , ಶುಕ್ರವಾರ, 4 ಏಪ್ರಿಲ್ 2025 (17:41 IST)
Photo Courtesy X
ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೂಲಂಕುಶವಾಗಿ ಪಾರದರ್ಶಕ ತನಿಖೆ ನಡೆದು ಸತ್ಯ ಹೊರಬರಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅಗ್ರಹಿಸಿದರು.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡು, ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ.

ರಾಜಕೀಯ ಕಾರಣಗಳು ಹಾಗೂ ಒತ್ತಡಗಳ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತ ಎಫ್ಐಆರ್ ನಿಂದಾಗಿ ವಿನಯ್ ಆತ್ಮಹತ್ಯೆಗೆ ಶರಣಾಗಿರಬಹುದಾದ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬರುತ್ತಿದ್ದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಅನಗತ್ಯ ಕಿರುಕುಳ, ಒತ್ತಡ,
ದೌರ್ಜನ್ಯಗಳು ನಡೆಯುತ್ತಿದ್ದು ಈ ನಿಟ್ಟಿನಲ್ಲಿ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯು ಅತ್ಯಂತ  ಪಾರದರ್ಶಕವಾಗಿ ನಡೆಯಬೇಕೆಂದು ಬಿಜೆಪಿ ಆಗ್ರಹಪಡಿಸುತ್ತದೆ.

ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ ಒತ್ತಡ ಉಂಟಾಗಲು ಕಾರಣರಾದವರ ವಿರುದ್ಧ ರಾಜ್ಯ ಸರ್ಕಾರ ಈ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು  ಒತ್ತಾಯಿಸುವೆ. ಮೃತ ಕಾರ್ಯಕರ್ತ ವಿನಯ್ ಅವರ ನಿಧನದ ನೋವಿನಲ್ಲಿರುವ ಕುಟುಂಬ ವರ್ಗದವರಿಗೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ವಿನಯ್ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ.

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ