Webdunia - Bharat's app for daily news and videos

Install App

ವಿನಯ್ ಸೋಮಯ್ಯ ಆತ್ಮಹತ್ಯೆ: ಸೂಕ್ತ ತನಿಖೆಗೆ ವಿಜಯೇಂದ್ರ ಆಗ್ರಹ

Sampriya
ಶುಕ್ರವಾರ, 4 ಏಪ್ರಿಲ್ 2025 (17:41 IST)
Photo Courtesy X
ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೂಲಂಕುಶವಾಗಿ ಪಾರದರ್ಶಕ ತನಿಖೆ ನಡೆದು ಸತ್ಯ ಹೊರಬರಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅಗ್ರಹಿಸಿದರು.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡು, ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ.

ರಾಜಕೀಯ ಕಾರಣಗಳು ಹಾಗೂ ಒತ್ತಡಗಳ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತ ಎಫ್ಐಆರ್ ನಿಂದಾಗಿ ವಿನಯ್ ಆತ್ಮಹತ್ಯೆಗೆ ಶರಣಾಗಿರಬಹುದಾದ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬರುತ್ತಿದ್ದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಅನಗತ್ಯ ಕಿರುಕುಳ, ಒತ್ತಡ,
ದೌರ್ಜನ್ಯಗಳು ನಡೆಯುತ್ತಿದ್ದು ಈ ನಿಟ್ಟಿನಲ್ಲಿ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯು ಅತ್ಯಂತ  ಪಾರದರ್ಶಕವಾಗಿ ನಡೆಯಬೇಕೆಂದು ಬಿಜೆಪಿ ಆಗ್ರಹಪಡಿಸುತ್ತದೆ.

ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ ಒತ್ತಡ ಉಂಟಾಗಲು ಕಾರಣರಾದವರ ವಿರುದ್ಧ ರಾಜ್ಯ ಸರ್ಕಾರ ಈ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು  ಒತ್ತಾಯಿಸುವೆ. ಮೃತ ಕಾರ್ಯಕರ್ತ ವಿನಯ್ ಅವರ ನಿಧನದ ನೋವಿನಲ್ಲಿರುವ ಕುಟುಂಬ ವರ್ಗದವರಿಗೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ವಿನಯ್ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments