ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಮತ್ತೆ ಭುಗಿಲೆದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ ತಮಿಳುನಾಡಿನ 27 ವಾಹನಗಳಿಗೆ ಬೆಂಕಿ ಹಚ್ಚಿ ದ್ವಂಸಗೊಳಿಸಲಾಗಿದೆ. ಅದೇ ರೀತಿ ತಮಿಳುನಾಡಿನಲ್ಲಿ ಕರ್ನಾಟಕದ ವಾಹನಗಳನ್ನು ದ್ವಂಸ ಮಾಡಲಾಗಿದೆ. ಈ ಘಟನೆಗಳು ದುರಾದೃಷ್ಟಕರ ಎಂದು ರಾಜ್ಯ ಗೃಹ ಖಾತೆ ಸಚಿವ ಜಿ.ಪರಮೇಶ್ವರ್ ವಿಷಾದ ವ್ಯಕ್ತಪಡಿಸಿದ್ದಾರೆ.
ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಹಾಗೂ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ಮಾಡಿರುವ ಘಟನೆಯಿಂದ ರಾಜ್ಯದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಯಲ್ಲಿ ಉಗ್ರ ಪ್ರತಿಭಟನೆ ನಡೆದಿದ್ದು, ಈ ವೇಳೆ ತಮಿಳುನಾಡಿನ ವಾಹನಗಳನ್ನು ದ್ವಂಸಗೊಳಿಸಲಾಗಿದೆ ಎಂದರು.
ಪ್ರತಿಭಟನೆ ಉಗ್ರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 144 ಸೆಕ್ಸೆನ್ ಜಾರಿ ಮಾಡುವಂತೆ ಹಾಗೂ ಪಾಂಡವಪುರದ 4 ಡ್ಯಾಂಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಈಗಾಗಲೇ ಕೇಂದ್ರದಿಂದ 10 ಪೊಲೀಸ್ ತುಕಡಿಯನ್ನು ಕರೆಸಿಕೊಂಡಿದ್ದು, ಇನ್ನೂ 10 ಪೊಲೀಸ್ ತುಕಡಿಯನ್ನು ಕಳುಹಿಸಿ ಕೊಡುವಂತೆ ಮನವಿ ಮಾಡಿಕೊಂಡಿದ್ದೇನೆ ಎಂದು ತಿಳಿಸಿದರು.
ಉಭಯ ರಾಜ್ಯಗಳ ನಡುವಿನ ಗಲಭೆಗೆ ಸಂತೋಷ್ ಎಂಬ ಯುವಕನೇ ನೇರ ಕಾರಣ. ಪ್ರತಿಭಟನಾನಿರತರನ್ನು ಪ್ರಚೋದಿಸುವಂತೆ ಪೋಸ್ಟ್ ಮಾಡಿರುವ ಹಿನ್ನೆಲೆಯಲ್ಲಿ ಸಂತೋಷ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ರಾಜ್ಯ ಗೃಹ ಖಾತೆ ಸಚಿವ ಜಿ.ಪರಮೇಶ್ವರ್ ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ