Select Your Language

Notifications

webdunia
webdunia
webdunia
webdunia

ನಿತ್ಯ 100ಕ್ಕೂ ಹೆಚ್ಚು ಮಂದಿಗೆ ವೈರಸ್!

ನಿತ್ಯ 100ಕ್ಕೂ ಹೆಚ್ಚು ಮಂದಿಗೆ ವೈರಸ್!
ಮಂಗಳೂರು , ಬುಧವಾರ, 16 ನವೆಂಬರ್ 2022 (10:22 IST)
ಮಂಗಳೂರು : ಕಡಲನಗರಿ ಮಂಗಳೂರಿನಲ್ಲಿ ಕೆಂಗಣ್ಣು ಕಾಯಿಲೆ ರೋಗದಿಂದ ಜನ ಸುಸ್ತಾಗಿ ಹೋಗಿದ್ದಾರೆ.

ಕಣ್ಣಿನ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದು ಜಿಲ್ಲಾ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಜನರಿಗೆ ಕರೆ ನೀಡಿದೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೆಂಗಣ್ಣು ಕಾಯಿಲೆ ಹೆಚ್ಚಾಗ್ತಿದೆ. ಮಂಗಳೂರು ನಗರ ಹೊರವಲಯದ ಬಜಪೆ, ಎಕ್ಕಾರು ಸೇರಿದಂತೆ ಬಂಟ್ವಾಳ, ಬೆಳ್ತಂಗಡಿ ತಾಲೂಕು ಪರಿಸರದಲ್ಲಿ ಹೆಚ್ಚಿನ ಜನರಲ್ಲಿ ಮದ್ರಾದ್ ಐ ಕಾಯಿಲೆ ಆವರಿಸಿದೆ.

ಇಡೀ ಊರಿನಲ್ಲಿ ಕಪ್ಪು ಕನ್ನಡಕ ಧರಿಸಿ ಓಡಾಡೋ ಜನ ಕಾಣಿಸ್ತಿದ್ದಾರೆ. ಭಾದಿತರಲ್ಲಿ ವಿದ್ಯಾರ್ಥಿಗಳು, ವ್ಯಾಪಾರಿಗಳು ಹೆಚ್ಚಿದ್ದು ಇವರ ಮೂಲಕ ಈ ವೈರಸ್ ಇತರರಿಗೆ ವೇಗವಾಗಿ ಹರಡುತ್ತಿದೆ. ಹೀಗಾಗಿ ದಿನವೊಂದಕ್ಕೆ 100ಕ್ಕಿಂತ ಹೆಚ್ಚು ಜನ ಈ ಕೆಂಗಣ್ಣು ಕಾಯಿಲಿಗೆ ತುತ್ತಾಗುತ್ತಿದ್ದು ಕಣ್ಣಿನ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಹತ್ಯೆ ಪ್ರಕರಣ : ಪೊಲೀಸರ ಮುಂದೆ ರೋಚಕ ಸತ್ಯ ಬಾಯ್ಬಿಟ್ಟ ಕಿರಾತಕ!