Publish Date: Wed, 15 May 2019 (14:55 IST)
Updated Date: Wed, 15 May 2019 (14:57 IST)
ಜೆಡಿಎಸ್ ನ ರಾಜ್ಯ ಅಧ್ಯಕ್ಷರಾಗಿರುವ ಹೆಚ್.ವಿಶ್ವನಾಥ್ ವಿರುದ್ಧ ಸಚಿವರೊಬ್ಬರು ಖಾರವಾಗಿ ಟಾಂಗ್ ನೀಡಿದ್ದಾರೆ.
ವಿಶ್ವನಾಥ್ ಗೆ ಬಾಯಿ ಚಲಪ ಇರಬಹುದೇನೋ ಅದಕ್ಕಾಗಿಯೇ ಅವರು ಸಿದ್ದರಾಮಯ್ಯರ ವಿರುದ್ಧ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ. ಹೀಗಂತ ಸಚಿವ ಎಂ.ಟಿ.ಬಿ.ನಾಗರಾಜ ಟೀಕೆ ಮಾಡಿದ್ದಾರೆ.
ವಿಶ್ವನಾಥ ಮನಸ್ಸಿಗೆ ಬಂದ ಹಾಗೆ ಮಾತನಾಡಬಾರದು. ದೇವರ ಆಶೀರ್ವಾದ ಹಾಗೂ ಜನರ ಪ್ರೀತಿ ಇದ್ದರೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗೋದ್ರಲ್ಲಿ ತಪ್ಪೇನಿದೆ ಎಂದು ಕೇಳಿದ್ರು.
ಮೈತ್ರಿ ಸರಕಾರ ಸುಭದ್ರವಾಗಿದೆ. ಚುನಾವಣೆ ನೀತಿ ಸಂಹಿತೆ ತೆರವುಗೊಂಡ ಬಳಿಕ ಕಾಮಗಾರಿಗಳು, ಅಭಿವೃದ್ಧಿ ಕೆಲಸಗಳು ವೇಗ ಪಡೆದುಕೊಳ್ಳಲಿವೆ ಎಂದು ಹೇಳಿದ್ರು.