Publish Date: Sun, 22 Jul 2018 (21:14 IST)
Updated Date: Sun, 22 Jul 2018 (21:16 IST)
ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ಹೆಚ್.ಡಿ.ಕುಮಾರಸ್ವಾಮಿ ಸೋಮವಾರ ಆಗಮಿಸುತ್ತಿದ್ದಾರೆ. ಕ್ಷೇತ್ರದ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಅಭಿನಂದನೆ ಹಾಗೂ ಕೃತಜ್ಞತೆ ಸಲ್ಲಿಸಲು ತಾಲೂಕಿಗೆ ಕುಮಾರಸ್ವಾಮಿ ಆಗಮಿಸುತ್ತಿದ್ದಾರೆ. ಹೆಚ್ಡಿಕೆ ಆಗಮನಕ್ಕೆ ಈಗಾಗಲೇ ಚನ್ನಪಟ್ಟಣ ನಗರದ ಮಹದೇಶ್ವರ ದೇವಾಲಯದ ಬಳಿ ವೇದಿಕೆ ನಿರ್ಮಾಣ ಕಾರ್ಯ ಕೂಡ ಭರದಿಂದ ಸಾಗಿದೆ. ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿಯಾದ ನಂತ್ರ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸುತ್ತಿದ್ದು ಕಾರ್ಯಕರ್ತರಿಗೆ ಅಭಿನಂದನೆ ಹಾಗೂ ಅಭಿವೃದ್ಧಿಯನ್ನು ಸಹ ಹೊತ್ತು ತರುತ್ತಿದ್ದಾರೆ.
ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಡಿಕೆ ಚಾಲನೆ ನೀಡಲಿದ್ದಾರೆ. ಸಿಎಂ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸುತ್ತಿರುವುದರಿಂದ ಕಾರ್ಯಕರ್ತರಲ್ಲಿ ಹಾಗೂ ಮುಖಂಡರಲ್ಲಿ ಉತ್ಸಾಹ ಹೆಚ್ಚಾಗಿಯೆ ಇದೆ. ಸಿಎಂ ವೇದಿಕೆ ಬರುತ್ತಿರುವಂತ್ತೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ನಡೆಸಲು ಮುಖಂಡರು ಸಿದ್ಧತೆ ಮಾಡಿಕೊಂಡಿದ್ದಾರೆ. ಈಗಾಗಲೇ ಈ ಸಂಬಂಧ ಅನುಮತಿ ಕೂಡ ಪಡೆದಿರುವ ಸ್ಥಳೀಯ ಮುಖಂಡರು ಅಂತಿಮ ಹಂತದ ಸಿದ್ಧತೆಯಲ್ಲಿ ತೊಡಗಿದ್ದಾರೆ.