Publish Date: Wed, 12 Sep 2018 (16:59 IST)
Updated Date: Wed, 12 Sep 2018 (17:01 IST)
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ನಿಯೋಗ ಪ್ರಧಾನಿ ಭೇಟಿ ಮಾಡಿದ ಬೆನ್ನಲ್ಲೇ, ಕೇಂದ್ರದ ನೆರೆ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸಿದೆ.
ಕೇಂದ್ರದ ನೆರೆ ಅಧ್ಯಯನ ತಂಡ ಮಂಗಳೂರಿಗೆ ಆಗಮಿಸಿದೆ. ಮಂಗಳೂರಿನಲ್ಲಿ ವೀಕ್ಷಣೆ ಬಳಿಕ ಉಡುಪಿಗೆ ತೆರಳಿತು. ಸಂಜೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಸಭೆ ನಡೆಸಿತು.
ನಾಳೆ ಪುತ್ತೂರು, ಬೆಳ್ತಂಗಡಿ, ಸುಬ್ರಮಣ್ಯ ತಾಲೂಕುಗಳಿಗೆ ನೆರೆ ಅಧ್ಯಯನ ತಂಡ ಭೇಟಿ ನೀಡಲಿದೆ. ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ. ಖಾದರ್ ಹಾಗೂ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರೊಂದಿಗೆ ಕೇಂದ್ರ ತಂಡ ಸಭೆ ನಡೆಸಿತು.
ಭಾರಿ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ನಷ್ಟ ಆಗಿದೆ. ಸಮಗ್ರ ವರದಿ ನೀಡುವಂತೆ ಸಚಿವ ಯು. ಟಿ. ಖಾದರ್ ಕೇಂದ್ರ ತಂಡಕ್ಕೆ ಮನವಿ ಮಾಡಿದರು.