Publish Date: Fri, 17 Jun 2022 (08:36 IST)
Updated Date: Fri, 17 Jun 2022 (10:38 IST)
ಹಾಸನ : ಜಿಲ್ಲೆಯ ಬೇಲೂರು ತಾಲೂಕಿನ ವಿಶ್ವವಿಖ್ಯಾತ ಚನ್ನಕೇಶವ ದೇವಾಲಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿದರು.
ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ದೇವಾಲಯಕ್ಕೆ ಭೇಟಿ ನೀಡಿದ ಗೆಹ್ಲೋಟ್ ಅವರನ್ನು ಅಲ್ಲಿನ ಅಧಿಕಾರಿಗಳು ಸ್ವಾಗತಿಸಿದ್ದು, ಶಾಸಕ ಕೆ.ಎಸ್.ಲಿಂಗೇಶ್ ಹಾರ ಹಾಕಿ ಸನ್ಮಾನಿಸಿದ್ದಾರೆ.
ಜೊತೆಗೆ ಅಲ್ಲಿನ ಅರ್ಚಕರು ಪೂರ್ಣಕುಂಭ ಸ್ವಾಗತದೊಂದಿಗೆ ಚನ್ನಕೇಶವನ ದರ್ಶನಕ್ಕೆ ಕರೆದೊಯ್ದಿದ್ದಾರೆ.