Publish Date: Wed, 09 Nov 2022 (17:36 IST)
Updated Date: Wed, 09 Nov 2022 (17:38 IST)
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಗರ್ಭಿಣಿಯನ್ನು ದಾಖಲಿಸಲು ನಿರಾಕರಿಸಿದ್ರಿಂದ ತಾಯಿ ಮತ್ತು ಅವಳಿ ಮಕ್ಕಳು ಸರಿಯಾದ ಚಿಕಿತ್ಸೆ ಇಲ್ಲದೆ ಸಾವನಪ್ಪಿದ್ರು. ಈ ಪ್ರಕರಣ ಸರ್ಕಾರವನ್ನ ಮುಜುಗರಕ್ಕೆ ಗುರಿ ಮಾಡಿತ್ತು. ಇದೀಗ ಗೃಹ ಸಚಿವ ಆರಗ ಜ್ಞಾನೇಂದ್ರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಸ್ಪತ್ರೆಯ ಅಧಿಕಾರಿಗಳು, ವೈದ್ಯರು ಹಾಗೂ ಸಿಬ್ಬಂದಿ ಜೊತೆ ಗೃಹ ಸಚಿವರು ಸಭೆ ನಡೆಸಿದ್ದು, ಸಭೆಯಲ್ಲಿ ಜಿಲ್ಲಾಧಿಕಾರಿ Y.S. ಪಾಟೀಲ್, CEO ವಿದ್ಯಾಕುಮಾರಿ, ಶಾಸಕ ಜ್ಯೋತಿ ಗಣೇಶ್, SP ರಾಹುಲ್ ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ರು.