Publish Date: Tue, 05 Jul 2022 (19:49 IST)
Updated Date: Tue, 05 Jul 2022 (19:52 IST)
ಇಂಡಿಯನ್ ಸೊಸೈಟಿ ಆಫ್ ವೆಸ್ಟರ್ನ್ ಆಸ್ಟ್ರೇಲಿಯಾ ಆಯೋಜಿಸಿದ್ದ ಸಭೆಯಲ್ಲಿ ಇದೇ ಮೊದಲ ಬಾರಿಗೆ ಭಾರತ ಸರ್ಕಾರದ ಸಚಿವರ ನೇತೃತ್ವದ ನಿಯೋಗವೊಂದು ಅನಿವಾಸಿ ಭಾರತೀಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ. ಐಎಸ್ಡಬ್ಲ್ಯೂಎ ಕಮ್ಯೂನಿಟಿ ಸೆಂಟರ್ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾದ ಪ್ರಮುಖ ಜನಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರು ಹಾಜರಿದ್ದರು. ಆಸ್ಟ್ರೇಲಿಯಾದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಸಚಿವರ ನೇತೃತ್ವದಲ್ಲಿ ನಿಯೋಗವೊಂದು ಇಲ್ಲಿಗೆ ಭೇಟಿ ನೀಡಿದೆ. ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಈ ಭೇಟಿ ನಡೆದಿದೆ.