Webdunia - Bharat's app for daily news and videos

Install App

ಅಧ್ಯಕ್ಷ ಕಾಳೇಗೌಡ ಮತ್ತು ಅಪ್ಪಾಜಿಗೌಡ ಸೇರಿದಂತೆ ಒಟ್ಟು ಮೂವರ ವಿರುದ್ಧ ವಿವಿಪುರಂ‌ ಪೊಲೀಸರು ಎಫ್ ಐಆರ್

Webdunia
ಶುಕ್ರವಾರ, 1 ಅಕ್ಟೋಬರ್ 2021 (22:08 IST)
ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಕಾಳೇಗೌಡ ಮತ್ತು ಅಪ್ಪಾಜಿಗೌಡ ಸೇರಿದಂತೆ ಒಟ್ಟು ಮೂವರ ವಿರುದ್ಧ ವಿವಿಪುರಂ‌ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
ಕಿಮ್ಸ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬರು ಪಾವತಿಸಿದ್ದ 70 ಲಕ್ಷ ರೂ. ಶುಲ್ಕವನ್ನು ಸ್ವಂತಕ್ಕೆ ಬಳಕೆ ಮಾಡಿಕೊಮಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ವಿದ್ಯಾರ್ಥಿಯು ಕಟ್ಟಿದ್ದ ಶುಲ್ಕವನ್ನು ಸ್ವಂತಕ್ಕೆ ಬಳಕೆ ಮಾಡಿಕೊಂಡ ಕಿಮ್ಸ್ ಕಾಲೇಜಿನ ಮಾಜಿ ಅಧ್ಯಕ್ಷ ಕಾಳೇಗೌಡ, ಅಪ್ಪಾಜಿಗೌಡ ಸೇರಿದಂತೆ ಒಟ್ಟು ಮೂವರ ವಿರುದ್ಧ ಕಿಮ್ಸ್ ನ ಸಿಇಒ ಸಿದ್ದರಾಮಯ್ಯ ವಿವಿಪುರಂ‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರಂತೆ ವಿವಿಪುರಂ ಪೊಲೀಸರು ಸಿಇಒ‌ ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
ಏನಿದು ಪ್ರಕರಣ:
ಡಾ. ಅನುಷಾ ದೀಪ್ತಿ ಎಂಬ ವಿದ್ಯಾರ್ಥಿನಿ ಕಿಮ್ಸ್ ನಲ್ಲಿ ಪ್ರಸೂತಿ ಹಾಗೂ ಸ್ತೀರೋಗ ಕೋರ್ಸ್ ವ್ಯಾಸಾಂಗ ಮಾಡುತ್ತಿದ್ದರು. 2016 -17 ರಲ್ಲಿ ಫೀಸ್ ಕಟ್ಟದ ಅನುಷಾಗೆ ನೋಟಿಸ್ ನೀಡಲಾಗಿತ್ತು. ನೋಟಿಸ್ ನೀಡಿದ್ದ ಕಾರಣ 70 ಲಕ್ಷ ರೂ. ಹಣವನ್ನು ಅಂದಿನ ಚೇರ್ಮನ್ ಕಾಳೇಗೌಡಗೆ ಅನುಷಾ ನೀಡಿದ್ದರು. ಆದರೆ ಅನುಷಾ ನೀಡಿದ್ದ ಹಣವನ್ನು ಕಾಲೇಜಿ ಗೆ ಸಂದಾಯ ಮಾಡದ ಅಂದಿನ ಅಧ್ಯಕ್ಷ ಸ್ವಂತಕ್ಕೆ ಬಳಕೆ ಮಾಡಿಕೊಂಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments