Publish Date: Thu, 27 Oct 2022 (09:08 IST)
Updated Date: Thu, 27 Oct 2022 (09:10 IST)
ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಸಲದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೋಟಿಕಂಠ ಗಾಯನ ಕಾರ್ಯಕ್ರಮವನ್ನು ಆಯೋಜಿಸಿದೆ.
ಈ ವಿಶೇಷ ಕಾರ್ಯಕ್ರಮದಲ್ಲಿ ಒಂದು ಕೋಟಿ ಜನರು ಭಾಗವಹಿಸ್ತಿರೋದು ಎಲ್ಲರಿಗೂ ಗೊತ್ತಿರುವ ವಿಷಯ.
ಹೊಸ ಸುದ್ದಿ ಏನಂದ್ರೆ, ಈಗಾಗಲೇ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬರೋಬ್ಬರಿ 1.10 ಕೋಟಿಯಷ್ಟು ಜನರು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಜನಸ್ಪಂದನೆ ವ್ಯಕ್ತವಾಗಿದೆ.