Publish Date: Sun, 04 Jun 2023 (07:38 IST)
Updated Date: Sun, 04 Jun 2023 (09:44 IST)
ಬೆಂಗಳೂರು : ಒಡಿಶಾ ರೈಲು ಅಪಘಾತದಿಂದ ಕೋಲ್ಕತ್ತಾದಲ್ಲಿ ಸಿಲುಕಿದ್ದ ಕರ್ನಾಟಕದ ವಾಲಿಬಾಲ್ ಆಟಗಾರರನ್ನು ಕರೆತರಲು ರಾಜ್ಯ ಸರ್ಕಾರ ಕೈಗೊಂಡ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ರೀಡಾಪಟುಗಳು ಧನ್ಯವಾದ ತಿಳಿಸಿದ್ದಾರೆ.
ಕೋಲ್ಕತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡ ತೆರಳಿತ್ತು.
ಈ ವೇಳೆ ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತದ ಪರಿಣಾಮವಾಗಿ ಮರಳಿ ರಾಜ್ಯಕ್ಕೆ ವಾಪಸ್ ಬರಲು ಪರಿತಪಿಸುತ್ತಿದ್ದ ತಂಡಕ್ಕೆ ರಾಜ್ಯ ಸರ್ಕಾರ ನಿಯೋಜಿಸಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಹಾಯ ಹಸ್ತ ನೀಡಿದ್ದಾರೆ. ಈ ಮೂಲಕ ತಂಡ ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್ಸಾಗಲು ಕ್ರಮ ಕೈಗೊಂಡಿದ್ದಾರೆ.