Publish Date: Wed, 28 Dec 2022 (07:19 IST)
Updated Date: Wed, 28 Dec 2022 (08:21 IST)
ಬೆಳಗಾವಿ : ರಾಜ್ಯದಲ್ಲಿ ಚುನಾವಣೆಗೆ ಇನ್ನು 6 ತಿಂಗಳು ಮಾತ್ರ ಇದ್ದರೂ ಮತ್ತೆ ಸಂಪುಟ ಸರ್ಕಸ್ ಶುರುವಾಗಿದೆ. ಕೆಲವು ಸಚಿವಾಕಾಂಕ್ಷಿಗಳ ಒತ್ತಡ ಹಿನ್ನೆಲೆ ಸಿಎಂ ಬೊಮ್ಮಾಯಿ,
ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೋಮವಾರ ರಾತ್ರಿ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು.
ಎರಡೂವರೆ ಗಂಟೆಗಳ ಚರ್ಚೆಯಲ್ಲಿ ಸಚಿವ ಸಂಪುಟ ವಿಸ್ತರಣೆಯ ತುರ್ತು ಅಗತ್ಯದ ಬಗ್ಗೆ ಸಿಎಂ ಮನವರಿಕೆ ಮಾಡಿಕೊಟ್ಟಿದ್ದಾರೆ ಅಂತ ತಿಳಿದು ಬಂದಿದೆ. ಸಂಪುಟದ ಪ್ರಾಂತ್ಯವಾರು ಮತ್ತು ಜಾತಿವಾರು ಸಚಿವರ ಮಾಹಿತಿ ಪಡೆದ ಹೈಕಮಾಂಡ್, ವಿಸ್ತರಣೆ ಬಗ್ಗೆ ಮುಂದೆ ತಿಳಿಸುತ್ತೇವೆ ಎಂದಿದ್ದಾರೆ.
ಈ ಬೆನ್ನಲ್ಲೇ ಬೆಳಗ್ಗೆ ಈಶ್ವರಪ್ಪ ಅವರಿಗೆ ಸಿಎಂ ಬೊಮ್ಮಾಯಿ ದೂರವಾಣಿ ಕರೆ ಮಾಡಿ ಸಂಪುಟ ಸೇರ್ಪಡೆಗೆ ಹೈಕಮಾಂಡ್ ಒಪ್ಪಿಕೊಂಡಿದೆ ಎಂದು ಮಾಹಿತಿ ಕೊಟ್ಟಿದ್ದಾರೆ ಅಂತ ತಿಳಿದು ಬಂದಿದೆ. ಆದರೆ ಈಶ್ವರಪ್ಪ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ.