ಸಂಪುಟ ವಿಸ್ತರಣೆ: ಕೈ ಪಾಳೆಯದಲ್ಲಿ ತೀವ್ರಗೊಂಡ ಒತ್ತಡ

Webdunia
ಶನಿವಾರ, 1 ಡಿಸೆಂಬರ್ 2018 (20:27 IST)
ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಯ ಸಂಕಟಕ್ಕೆ ಕಾಂಗ್ರೆಸ್ ಸಿಲುಕಿದೆ.

ರಾಜ್ಯ ಕಾಂಗ್ರೆಸ್ ನಾಯಕರು ಸಂಪುಟ ವಿಸ್ತರಣೆಗೆ ಹೈಕಮಾಂಡ್ ಕದ ತಟ್ಟಲು ಮುಂದಾಗಿದ್ದು, ಸಂಪುಟ ವಿಸ್ತರಣೆಯಾಗದಿದ್ದರೆ ಶಾಸಕರ ಅತೃಪ್ತಿ, ಅಸಮಾಧಾನ ಸ್ಫೋಟವಾಗಲಿದೆ. ಬಿಜೆಪಿ ಸೆಳೆತದಿಂದ ಶಾಸಕರನ್ನು ದೂರ ಇಡುವುದು ಕಷ್ಟವಾಗುತ್ತದೆ ಎಂಬುದನ್ನು ಹೈಕಮಾಂಡ್ಗೆ ಮನವರಿಕೆ ಮಾಡಿಕೊಡಲು ತೀರ್ಮಾನಿಸಿದ್ದಾರೆ.

ಸಚಿವಾಕಾಂಕ್ಷಿ ಶಾಸಕರುಗಳು ಬೆಳಗಾವಿಯಲ್ಲಿ ಡಿ. 10 ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಆಗಲೇಬೇಕು. ಇಲ್ಲದಿದ್ದರೆ ನಮ್ಮ ದಾರಿ ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಸಂಕಟವನ್ನು ಬಗೆಹರಿಸಿಕೊಳ್ಳಲು ರಾಜ್ಯ ಕಾಂಗ್ರೆಸ್ ನಾಯಕರು ಪಕ್ಷದ ಹೈಕಮಾಂಡ್ನ್ನು ಭೇಟಿ ಮಾಡಿ ಚರ್ಚೆ ನಡೆಸಲು ನಿರ್ಧರಿಸಿದ್ದಾರೆ.

ಸಂಪುಟ ವಿಸ್ತರಣೆಯಾಗದಿದ್ದರೆ ಪಕ್ಷದ ಶಾಸಕರಲ್ಲಿ ಒಗ್ಗಟ್ಟು ಕಾಪಾಡಿಕೊಳ್ಳುವುದು ಕಷ್ಟವಾಗುತ್ತದೆ. ಇದರಿಂದ ಸರ್ಕಾರಕ್ಕೆ ಕಂಟಕವಾಗಬಹುದು. ಹಾಗಾಗಿ ಸಂಪುಟ ವಿಸ್ತರಣೆಗೆ ಒಪ್ಪಿಗೆ ನೀಡಿ ಎಂದು ರಾಜ್ಯದ ಕಾಂಗ್ರೆಸ್ ನಾಯಕರು ಹೈಕಮಾಂಡ್ಗೆ ಮನವಿ ಮಾಡಿಕೊಳ್ಳಲು ತೀರ್ಮಾನಿಸಿದ್ದಾರೆ.

 ಸಚಿವ ಸಂಪುಟ ವಿಸ್ತರಣೆ ವಿಷಯ ಕಾಂಗ್ರೆಸ್ ಗೆ ಸದ್ಯ ಬಿಸಿ ತುಪ್ಪದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments