ಸಂಪುಟ ವಿಸ್ತರಣೆ ?

Webdunia
ಭಾನುವಾರ, 6 ಫೆಬ್ರವರಿ 2022 (11:44 IST)
ಬೆಂಗಳೂರು : ಪಂಚರಾಜ್ಯ ಚುನಾವಣಾ ಪ್ರಚಾರದ ಕಾವು ದಿನೇ ದಿನೇ ಕಾವೇರುತ್ತಿರುವ ಸಮಯದಲ್ಲಿ ಕ್ಯಾಬಿನೆಟ್ ಗುದ್ದಾಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಲೆ ಬಿಸಿ ತಂದಿದೆ.
 
ಸಂಪುಟ ಪುನಾರಚನೆಗೆ ಒಪ್ಪಿಗೆ ಪಡೆಯಲು ಸಿಎಂ ಮುಂದಾದರೂ ಪಕ್ಷದ ಹೈಕಮಾಂಡ್ ನಾಯಕರು ಪಂಚರಾಜ್ಯ ಚುನಾವಣೆಯಲ್ಲಿ ಬ್ಯುಸಿ ಇದ್ದಾರೆ. ದೆಹಲಿ ಭೇಟಿ ನೀಡಲು ಸಜ್ಜಾಗಿ ನಿಂತಿರುವ ಸಿಎಂ ಬೊಮ್ಮಾಯಿಗೆ ಭೇಟಿಗೆ ಇನ್ನೂ ಗ್ರೀನ್ಸಿಗ್ನಲ್ ಸಿಕ್ಕಿಲ್ಲ.

ಇಂದು ಹೊರಡಲು ಸಿದ್ಧವಾಗಿದ್ದರೂ, ಕೆಲ ಸಂಸದರ ಸೂಚನೆ ಮೇರೆಗೆ ಸೋಮವಾರ ದೆಹಲಿಗೆ ತೆರಳಲು ಸಿಎಂ ಬೊಮ್ಮಾಯಿ ತೀರ್ಮಾನಿಸಿದ್ದಾರೆ. ಇತ್ತ, ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ರೇಣುಕಾಚಾರ್ಯ, ನನಗೆ ಮಂತ್ರಿ ಸ್ಥಾನ ಬೇಕೇಬೇಕು ಎಂದು ಕುಳಿತಿದ್ದಾರೆ.

ಗೋವಾದಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿರುವ ರಮೇಶ್ ಜಾರಕಿಹೊಳಿ, ಪಣಜಿಯಿಂದ ನೇರವಾಗಿ ದೆಹಲಿಗೆ ತೆರಳುವ ಸಂಭವ ಇದೆ. ಸಂಪುಟ ವಿಸ್ತರಣೆ ಮಾಡುವುದಿದ್ದರೆ ಈಗಲೇ ಈಗಲೇ ಮಾಡಬೇಕು. ಆಮೇಲೆ ಮಾಡಿದ್ರೂ ಪ್ರಯೋಜನ ಆಗಲ್ಲ ಎಂದು ಶಾಸಕ ಯತ್ನಾಳ್ ಹೇಳಿದ್ದಾರೆ.

ಪ್ರಸಕ್ತ ಅವಧಿಯ ಸರ್ಕಾರದಲ್ಲಿ ಈ ಬಾರಿ ಸಂಪುಟ ಸರ್ಜರಿ ನಡೆದ್ರೆ ಬಹುಶಃ ಇದೇ ಕೊನೆಯದ್ದು. ಹೀಗಾಗಿ ಕೆಲ ತಿಂಗಳ ಮಟ್ಟಿಗಾದ್ರೂ ಮಂತ್ರಿಯಾಗೋಣ ಎಂದು ಬಿಜೆಪಿಯ ಒಂದು ಡಜನ್ಗೂ ಹೆಚ್ಚು ಶಾಸಕರು ಮಂತ್ರಿಯಾಗಲು ಪ್ರಯತ್ನ ನಡೆಸಿದ್ದಾರೆ.

ಆದಷ್ಟು ಬೇಗ ಸಂಪುಟ ಸರ್ಜರಿ ಮಾಡಿ ಎಂದು ಸಿಎಂ ಮೇಲೆ ಒತ್ತಡ ಹೇರುತ್ತಿದ್ದಾರೆ. ಬಹುತೇಕರು ತಮ್ಮದೇ ನೆಟ್ವರ್ಕ್ ಮೂಲಕ ಹೈಕಮಂಡ್ ಮಟ್ಟದಲ್ಲೂ ಲಾಬಿ ನಡೆಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments