Webdunia - Bharat's app for daily news and videos

Install App

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

Sampriya
ಶುಕ್ರವಾರ, 8 ಆಗಸ್ಟ್ 2025 (14:10 IST)
Photo Credit X
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ  ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. 

ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು. 


ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧ

ಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ ಮಾಡಿ, ಮತದಾನದ ಅಂಕಿ ಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಿ ದಾಖಲೆಗಳ ಸಮೇತ ದೇಶದ ಜನರ ಮುಂದೆ ಇಟ್ಟಿದ್ದಾರೆ ಎಂದು ವಿವರಿಸಿದರು.

ಚುನಾವಣಾ ಆಯೋಗ ಸಂವಿಧನದ ಅಡಿಯಲ್ಲಿ ನ್ಯಾಯಬದ್ದವಾಗಿ ನಡೆದುಕೊಳ್ಳಬೇಕು. ಸಂವಿಧಾನ ಕೊಟ್ಟಿರುವ ಮತದಾನದ ಮೂಲಭೂತ ಹಕ್ಕನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ದೇಶದ ಜನತೆ ಅವಕಾಶ ಕೊಡುವುದಿಲ್ಲ ಎಂದರು.

ಮನುವಾದಿಗಳು ಸಂವಿಧಾನ ವಿರೋಧಿಗಳು. ಇವರು ಸಂವಿಧಾನದ ಪ್ರಕ್ರಿಯೆಯನ್ನೇ ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ವಂಚನೆ ಕಾರಣದಿಂದ ಸೆಂಟ್ರಲ್ ಲೊಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತಿದೆಯೇ ಹೊರತು ಜನಾಭಿಪ್ರಾಯ ಕಾಂಗ್ರೆಸ್ ಪರವಾಗಿಯೇ ಇತ್ತು ಎನ್ನುವುದು ಈಗ ಗೊತ್ತಾಗಿದೆ ಎಂದರು. 

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 14 ಸೀಟುಗಳನ್ನು ಗೆಲ್ಲಬೇಕಿತ್ತು. ಆದರೆ ಮತಕಳ್ಳತನದ ಕಾರಣದಿಂದ ನಾವು ಸೋತಿದ್ದೇವೆ. EVM ಬಂದ ಮೇಲೆ ಇವನ್ನು ದುರುಯೋಗ ಮಾಡಿಕೊಳ್ಳುವ ಕೆಲಸ ಆಗುತ್ತಿರುವುದು ಈಗ ದಾಖಲೆ ಸಮೇತ ಸಿಕ್ಕಿಬಿದ್ದಿದ್ದಾರೆ ಎಂದರು.

ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ. ಇದಕ್ಕೆ ಇಡೀ ರಾಜ್ಯದ ಜನತೆ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದು ಘೋಷಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಅನೇಕ ಕ್ಷೇತ್ರಗಳಲ್ಲಿ ಮತಗಳ್ಳತನ: ಪ್ರಧಾನಿ, ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಗುಡುಗಿದ ರಾಹುಲ್‌

ಧರ್ಮಸ್ಥಳ: ಕಳೇಬರಹ ಶೋಧ ಪ್ರಕರಣಕ್ಕೆ ಹೊಸ ಟ್ವಿಸ್ಟ್‌, 13ನೇ ಪಾಯಿಂಟ್ ಬಿಟ್ಟು ಹೊಸ ಸ್ಥಳದತ್ತ ಎಸ್‌ಐಟಿ

ಶೋಧ ಮುಕ್ತಾಯ ನಂತರವೂ ಗನ್‌ಮ್ಯಾನ್‌ ಭದ್ರತೆ ಕೊಡಿ: ಎಸ್‌ಐಟಿ ಮುಂದೆ ದೂರುದಾರನ ಬೇಡಿಕೆ

ಭಾರತ–ಪಾಕ್‌ ಯುದ್ಧಕ್ಕೆ ಮಧ್ಯಸ್ಥಿಕೆ ನಮ್ಮದೇ: ಟ್ರಂಪ್‌ ಪರ ಮಾರ್ಕೊ ರುಬಿಯೊ ಬ್ಯಾಟಿಂಗ್‌

ಮುಂದಿನ ಸುದ್ದಿ
Show comments