Webdunia - Bharat's app for daily news and videos

Install App

KGF ಬಾಬು ಮನೆಯಲ್ಲಿ ವೋಟರ್ ಐಡಿಗಳು

Webdunia
ಗುರುವಾರ, 20 ಏಪ್ರಿಲ್ 2023 (18:01 IST)
ಉದ್ಯಮಿ, ಕಾಂಗ್ರೆಸ್​​ ಮುಖಂಡ ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ ನಡೆಸಿದ್ದು, ತನಿಖೆ ಮುಂದುವರೆದಿದೆ.. KGF ಬಾಬು ಮನೆಯಲ್ಲಿ ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿದ್ದು, KGF ಬಾಬುಗೆ ಸಂಕಷ್ಟ ಶುರುವಾಗಿದೆ.. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ 1,925 ವೋಟರ್ ಐಡಿಗಳು ಪತ್ತೆಯಾಗಿವೆ. HDFC ಬ್ಯಾಂಕ್ ಅಕೌಂಟ್​ ನಂಬರಿನ ಚೆಕ್​​​ಗಳು ಪತ್ತೆಯಾಗಿವೆ.. ಚೆಕ್​ಗಳ ಜೊತೆ ವೋಟರ್ ಐಡಿ ಅಟ್ಯಾಚ್ ಮಾಡಿ KGF ಬಾಬು ಇರಿಸಿದ್ರು. ಇನ್ನು ಮನೆಯ ನೆಲಮಹಡಿಯಲ್ಲಿ 26 ಬ್ಯಾಗ್​ಗಳಲ್ಲಿದ್ದ ಸೀರೆ, ಚಿಕ್ಕಪೇಟೆಗೆ ಸಂಬಂಧಿಸಿದ ಮುದ್ರಣ ಪ್ರತಿಗಳು, ವ್ಯಾನ್ ಹ್ಯೂಸನ್​​​​​​ ಕಂಪನಿಯ 481 ಸೂಟ್​ಗಳು ಪತ್ತೆಯಾಗಿವೆ.. ಇವೆಲ್ಲ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.. ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಹಿನ್ನೆಲೆ ಶಿವಾಜಿನಗರ ವಲಯದ ಚುನಾವಣಾ ಉಸ್ತುವಾರಿ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.. ಇಂದು ಹೈಗ್ರೌಂಡ್ಸ್ ಪೊಲೀಸರು ಕೋರ್ಟ್ ಪರ್ಮೀಷನ್ ಪಡೆದು FIR ದಾಖಲಿಸಲಿದ್ದಾರೆ. KGF ಬಾಬು ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ NCR ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments