Webdunia - Bharat's app for daily news and videos

Install App

ಕೈಗಾರಿಕೆಗಳ ಸಂಘದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Webdunia
ಬುಧವಾರ, 19 ಏಪ್ರಿಲ್ 2023 (15:46 IST)
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಮತ್ತು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ(GT & TC)ದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ  ಮತದಾನದ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಅವರು ಇಂದು ಚಾಲನೆ ನೀಡಿದರು.ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಂಘ(ಕಾಸಿಯಾ)ದ ಸಭಾಂಗಣದಲ್ಲಿ ಏರ್ಪಡಿಸಿದ್ದ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಎಲ್ಲಾ ವಲಯಗಳಲ್ಲಿರುವ ಐಟಿ-ಬಿಟಿ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಗಾರ್ಮೆಂಟ್ಸ್ ಗಳ ಉದ್ಯೋಗಿಗಳು ಕಾರ್ಯನಿರ್ವಹಿಸುವ ಸ್ಥಳಕ್ಕೆ ಖುದ್ದಾಗಿ ಭೇಟಿಯಾಗಿ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
 
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಸಾಕಷ್ಟು ಮಂದಿ ಕೆಲಸ ಮಾಡುತ್ತಿದ್ದು, ಅವರೆಲ್ಲರಿಗೂ ತಪ್ಪದೆ ಮತದಾನ ಮಾಡುವಂತೆ ತಮ್ಮ ಸಂಸ್ಥೆಗಳ ವತಿಯಿಂದ ಅರಿವು ಮೂಡಿಸುವ ಕೆಲಸ ಮಾಡಬೇಕು. ಉದ್ಯಮಿಗಳು ತಮ್ಮ- ತಮ್ಮ ಕೈಗಾರಿಕೆಗಳಲ್ಲಿ ಮತದಾನ ಜಾಗೃತಿಯ ಬಿತ್ತಿಪತ್ರಗಳನ್ನು ಅಂಟಿಸಿ ಅರಿವು ಮೂಡಿಸುವ ಕೆಲಸ ಮಾಡಬೇಕು ಮತ್ತು ಎಲ್ಲರೂ ಈ ಪ್ರಜಾಪ್ರಭುತ್ವದ ಹಬ್ಬದ ದಿನವಾದ ಮೇ. 10 ರಂದು ತಪ್ಪದೇ  ಮತದಾನದ ಮಾಡುವಂತೆ ಕೋರಿದರು.ಕಾಸಿಯಾ ಅಡಿಯಲ್ಲಿರುವ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಸುಮಾರು 5.6 ಲಕ್ಷ ಮಂದಿ ಕಾರ್ಯನಿರ್ವಹಿಸುತ್ತಿದ್ದು, ಮತದಾನದ ದಿನ ಎಲ್ಲರಿಗೂ ವೇತನ ಸಹಿತ ರಜೆ ನೀಡಿ ತಪ್ಪದೇ ಮತದಾನ ಮಾಡಲು ಉದ್ಯೋಗಿಗಳಿಗೆ ತಿಳಿಸಲಾಗುವುದೆಂದು ಸಭೆಯಲ್ಲಿ ಭಾಗವಹಿಸಿದ್ದ ಉದ್ಯಮಿಗಳು ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಾರ್ಟ್‌ಮೆಂಟ್‌ಗಳ ಮಾಲೀಕರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ಅಂಗೀಕಾರವಾಯಿತು ಮಹತ್ವದ ಮಸೂದೆ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ: 500 ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ

ಬಿಜೆಪಿ, ಜೆಡಿಎಸ್‌ ಹೋರಾಟದ ನಡುವೆಯೇ ನಾಗೇಂದ್ರಕ್ಕೆ ಮತ್ತೊಂದು ಖಾತೆ ಹಂಚಿದ ಮುಖ್ಯಮಂತ್ರಿ ಡಿಕೆಶಿ

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಬಿಗಿಪಟ್ಟು: ವಿಧಾನಸಭೆಯ ಐದನೇ ದಿನದ ಕಲಾಪ ಬಲಿ

ಮುಂದಿನ ಸುದ್ದಿ
Show comments