Webdunia - Bharat's app for daily news and videos

Install App

ಐಟಿ-ಬಿಟಿ ಸಂಸ್ಥೆಗಳ ಜೊತೆ ಮತದಾನ ಜಾಗೃತಿ ಕಾರ್ಯಕ್ರಮ

Webdunia
ಮಂಗಳವಾರ, 11 ಏಪ್ರಿಲ್ 2023 (19:36 IST)
ಪ್ರಜಾಪ್ರಭುತ್ವದ ಯಶಸ್ಸು ಚುನಾವಣೆಯಲ್ಲಿ ಗರಿಷ್ಠ ಮತದಾನದೊಂದಿಗೆ ಆಂತರಿಕವಾಗಿ ಸಂಬಂಧ ಹೊಂದಿದೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತರಾದ  ತುಷಾರ್ ಗಿರಿನಾಥ್   ಹೇಳಿದರು.
 
ಸ್ವೀಪ್ ಕಾರ್ಯಕ್ರಮದಡಿ ORRCA ಸಹಯೋಗದೊಂದಿಗೆ ಮಾನ್ಯತಾ ಬಿಸಿನೆಸ್ ಪಾರ್ಕ್ ನಲ್ಲಿ ಇಂದು ನಡೆದ ಮಾತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲಾ ಐಟಿ-ಬಿಟಿ ಸಂಸ್ಥೆ, ಕೈಗಾರಿಕಾ ಪ್ರದೇಶಗಳಲ್ಲಿ ಮತದಾನ ಜಾಗೃತಿ ವೇದಿಕೆ(Voter Awareness forum) ಸಿದ್ದಪಡಿಸಕೊಂಡು ಆ ಮೂಲಕ ಮತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
 
ಸಾರ್ವತ್ರಿಕ ವಿಧಾನಸಭೆ ಚುನಾವಣೆಗಾಗಿ ಎಲ್ಲಾ ರೀತಿಯ ತಯಾರಿಯನ್ನು ಮಾಡಿಕೊಳ್ಳಲಾಗಿದೆ. ಮೇ 13ರಿಂದ 20 ರವರೆಗೆ ಚುನಾವಣೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಮೇ 10 ರಂದು ಮತದಾನ ನಡೆಯಲಿದೆ. ಆ ದಿನ ಮತದಾನ ಮಾಡುವ ಉದ್ದೇಶಕ್ಕಾಗಿ ಐಟಿ-ಬಿಟಿ ಸಂಸ್ಥೆ, ಕೈಗಾರಿಕಾ ಪ್ರದೇಶಗಳಲ್ಲಿ ಕೆಲಸ ಮಾಡುವವರಿಗೆ ರಜೆಯನ್ನು ನೀಡಲಾಗುತ್ತದೆ. ಎಲ್ಲರೂ ಮತದಾನ ಮಾಡಬೇಕೆಂಬ ಉದ್ದೇಶದಿಂದ ರಜೆಯನ್ನು ನೀಡಲಾಗುತ್ತದೆ. ಆದರೆ, ಅದನ್ನು ಸಾಕಷ್ಟುಮಂದಿ ದುರುಪಯೋಗಪಡಿಸಿಕೊಳ್ಳುತ್ತಾರೆ. ಈ ಸಂಬಂಧ ಮತದಾನ ದಿನ್ನು ಅನ್ಯಕಾರ್ಯಗಳಿಗೆ ಬಳಸಿಕೊಳ್ಳದೆ ಮತಗಟ್ಟೆಗಳಿಗೆ ಭೇಟಿ ನೀಡಿ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಬೇಕೆಂದು ಮನವಿ ಮಾಡಿದರು. 
 
ಮತದಾನ ಪಟ್ಟಿಯಲ್ಲಿ ಹೆಸರಿರುವವರಿಗೆ 10 ದಿನದ ಮುಂಚಿತವಾಗಿಯೇ ಮತದಾನ ಮಾಡುವ ಚೀಟಿಯನ್ನು ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ. ಜೊತೆಗೆ ಓಟರ್ ಹೆಲ್ಪ್ ಲೈವ್ ತಂತ್ರಾಂಶವನ್ನು ಡೌನ್ಲೋಡ್ ಮಾಡಿಕೊಂಡು ಅದರ ಮೂಲಕ ಮತದಾನ ಮಾಡುವ ಮತಗಟ್ಟೆಯ ಮಾಹಿತಿ ಸೇರಿದಂತೆ ಇನ್ನಿತರೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು.
 
ವಿಶಿಷ್ಟ ಚೇತನರ ಐಕಾನ್ ಶ್ರೀಮತಿ ರಂಜನಿರಾಮಾನುಜಮ್ ರವರು ಮಾತನಾಡಿ, ಪ್ರತಿಯೊಬ್ಬರೂ ತಪ್ಪದೆ ಮತ ಚಲಾಯಿಸೋಣ, ಎಲ್ಲರೂ ತಪ್ಪದೆ ಮತದಾನ ಮಾಡಿ ಶೇಕಡಾವಾರು ಮತದಾನ ಪ್ರಮಾಣ ಹೆಚ್ಚಿಸೋಣ. ಇದು ನಮ್ಮೆಲ್ಲ ಜವಾಬ್ದಾರಿಯಾಗಿದೆ ಎಂದು ಹೇಳಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments