Publish Date: Sat, 12 May 2018 (14:28 IST)
Updated Date: Sat, 12 May 2018 (14:30 IST)
ದಾವಣಗೆರೆ : ದಾವಣಗೆರೆಯ ಮಾಯಕೊಂಡ ಕ್ಷೇತ್ರದಲ್ಲಿ ಮತದಾರರು ಮತದಾನ ಮಾಡುವುದಿಲ್ಲ ಎಂದು ಬಹಿಷ್ಕಾರ ಹಾಕಿದ್ದಾರೆ.
ಇಂದು ಕರ್ನಾಟಕದ ಚುನಾವಣಾ ಹಿನ್ನಲೆಯಲ್ಲಿ ಎಲ್ಲಾ ಕಡೆ ಮತದಾನದ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆದರೆ ರಾಂಪುರ ಗ್ರಾಮದ ಮತಗಟ್ಟೆಯಲ್ಲಿ ಇದುವರೆಗೂ ಯಾವೊಬ್ಬ ಮತದಾರನೂ ಮತ ಚಲಾಯಿಸಿಲ್ಲ ಎಂಬುದಾಗಿ ತಿಳಿದುಬಂದಿದೆ. ಗ್ರಾಮದಲ್ಲಿ ಸರಿಯಾದ ಮೂಲಭೂತ ಸೌಕರ್ಯ ಒದಗಿಸದೇ ಇರುವುದರಿಂದ ಕೋಪಗೊಂಡ ಗ್ರಾಮಸ್ಥರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ