Publish Date: Tue, 05 Dec 2017 (19:32 IST)
Updated Date: Tue, 05 Dec 2017 (19:34 IST)
ರಾಜ್ಯದಲ್ಲಿ ಅಶಾಂತಿ ಉಂಟು ಮಾಡಲು ರಾಜ್ಯ ಬಿಜೆಪಿ ನಾಯಕರಿಗೆ ಉಪದೇಶ ನೀಡಿರುವ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಬಹಿಷ್ಕಾರ ಹಾಕಬೇಕು ಎಂದು ಮಹಿಳಾ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ ತಡೆ ತಜ್ಞರ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಂಸದ ಪ್ರತಾಪಸಿಂಹ ಅವರ ಹೇಳಿಕೆ ಗಮನಿಸಿದಾಗ ರಾಜ್ಯದಲ್ಲಿ ಅಶಾಂತಿ ಉಂಟು ಮಾಡುವ ರೀತಿಯಲ್ಲಿ ಹೋರಾಟ ಮಾಡಬೇಕು ಎಂದು ಅಮಿತ್ ಶಾ ಹೇಳಿದ್ದಾರೆ ಎಂಬುದು ತಿಳಿದು ಬರುತ್ತದೆ. ಇಂತಹ ಸೂಚನೆ ನೀಡಿದ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದಾಗ ಅವರಿಗೆ ಜನರು ಬಹಿಷ್ಕಾರ ಹಾಕಬೇಕು ಎಂದಿದ್ದಾರೆ.
ಹುಣಸೂರಿನಲ್ಲಿ ನಡೆದ ಘಟನೆಯ ವೀಡಿಯೋ ವೀಕ್ಷಿಸಲಾಗಿದ್ದು, ಪ್ರತಾಪಸಿಂಹ ಉದ್ದೇಶಪೂರ್ವಕವಾಗಿ ಕಾರನ್ನು ಚಲಾಯಿಸಿಕೊಂಡು ಹೋಗಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೇಸು ದಾಖಲಿಸಿ ಕ್ರಮ ಜರುಗಿಸಬೇಕು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿರುವುದರಿಂದ ಬಿಜೆಪಿಯವರು ಅಶಾಂತಿಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.