Publish Date: Fri, 23 Dec 2022 (06:28 IST)
Updated Date: Thu, 22 Dec 2022 (22:31 IST)
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಪದವಿ ತರಗತಿಗಳ ಪ್ರಥಮ ಸೆಮಿಸ್ಟರ್ ಫಲಿತಾಂಶ ಇನ್ನು 10 ದಿನಗಳ ಒಳಗೆ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವಥ್ ನಾರಾಯಣ ಹೇಳಿದರು.
ವಿಧಾನಸಭೆ ಅಧಿವೇಶನದ ಶೂನ್ಯ ವೇಳೆಯಲ್ಲಿ ಶಾಸಕ ಯು.ಟಿ. ಖಾದರ್ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಸಚಿವರು ಉತ್ತರಿಸಿದರು.
ಮಂಗಳೂರು ವಿವಿಯ ಮೊದಲ ಸೆಮಿಸ್ಟರ್ ಫಲಿತಾಂಶ ಇದುವರೆಗೂ ಪ್ರಕಟವಾಗಿರುವುದಿಲ್ಲ. ವಿದ್ಯಾರ್ಥಿ ವೇತನ ಪಾವತಿಗೆ ಹಿಂದಿನ ವರ್ಷದ ಅಂಕಪಟ್ಟಿ ಕೇಳಲಾಗುತ್ತದೆ. ಹೀಗಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲೂ ಸಾಧ್ಯವಾಗುತ್ತಿಲ್ಲ ಎಂದು ಖಾದರ್ ಬೇಸರ ವ್ಯಕ್ತಪಡಿಸಿದರು.