ಪತ್ತೆಯಾದ ವಿವಿ ಪ್ಯಾಟ್ ಯಂತ್ರಗಳು: ಮತದಾರರಲ್ಲಿ ಆಕ್ರೋಶ

Webdunia
ಸೋಮವಾರ, 21 ಮೇ 2018 (15:51 IST)
ವಿಜಯಪುರ‌ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದ ಬಳಿ ಪತ್ತೆಯಾದ ವಿವಿ ಪ್ಯಾಟ್ ಮಶೀನ್ಸ್ ಘಟನೆ ಖಂಡಿಸಿ ಬಬಲೇಶ್ವರ ಕ್ಷೇತ್ರದ ಪರಾಜಿತ‌ ಬಿಜೆಪಿ ಅಭ್ಯರ್ಥಿ ವಿಜಯಕುಮಾರ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಬಬಲೇಶ್ವರ ನಾಕಾ ಬಳಿಯ ನಿವಾಸದಿಂದ ಡಿಸಿ ಕಚೇರಿವರೆಗೂ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗಿ ಚುನಾವಣೆಯಲ್ಲಿ ಭಾರಿ ಅವ್ಯವಹಾರವಾಗಿದೆ ಎಂದು ಆರೋಪಿಸಲಾಗಿದೆ.
 
ವಿವಿ ಪ್ಯಾಟ್ ಮಶೀನ್ಸ್ ಬಬಲೇಶ್ವರ ಕ್ಷೇತ್ರಕ್ಕೆ ಸೇರಿವೆ. ಘಟನೆಯನ್ನು ‌ಸಿಬಿಐ ತನಿಖೆಗೆ ವಹಿಸಬೇಕೆಂದು ‌ಒತ್ತಾಯಿಸಿದ ಪ್ರತಿಭಟನಾಕಾರರು ಜಿಲ್ಲಾಡಳಿತ ಹಾಗೂ ಚುನಾವಣಾಧಿಕಾರಿಗಳ ‌ವಿರುದ್ದ ಘೋಷಣೆ ಕೂಗಿದರು.
 
ನ್ಯಾಯ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದರಿಂದ ಡಿಸಿ ಕಚೇರಿ ಆವರಣದಲ್ಲಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments