Select Your Language

Notifications

webdunia
webdunia
webdunia
webdunia

ಕಾಯ್ದು ನೋಡಿ, ರಾಜ್ಯಕ್ಕೆ ಮತ್ತಷ್ಟು ಸಿಹಿ ಸುದ್ದಿ ನೀಡುತ್ತೇನೆ: ಪ್ರಕಾಶ್ ಜಾವ್ಡೇಕರ್

ಕಾಯ್ದು ನೋಡಿ, ರಾಜ್ಯಕ್ಕೆ ಮತ್ತಷ್ಟು ಸಿಹಿ ಸುದ್ದಿ ನೀಡುತ್ತೇನೆ: ಪ್ರಕಾಶ್ ಜಾವ್ಡೇಕರ್
ಹುಬ್ಬಳ್ಳಿ , ಭಾನುವಾರ, 28 ಆಗಸ್ಟ್ 2016 (16:51 IST)
ಧಾರವಾಡದಲ್ಲಿ ಐಐಟಿ ಉದ್ಘಾಟನೆ ಮಾಡಲು ಆಗಮಿಸಿದ್ದಕ್ಕೆ ಸಂತೋಷವಾಗಿದೆ. ಇದರಿಂದ ವಿದ್ಯಾಕಾಶಿ ಹಾಗೂ ಸಾಂಸ್ಕೃತಿಕ ನಗರಿಗೆ ಹೊಸ ಗರಿ ಬರುತ್ತಿರುವುದು ಹೆಮ್ಮೆಯ ಸಂಗತಿ. ಕಾಯ್ದು ನೋಡಿ, ರಾಜ್ಯಕ್ಕೆ ಇನ್ನಷ್ಟು ಯೋಜನೆಗಳನ್ನು ನೀಡುವ ಮೂಲಕ ಕರ್ನಾಟಕಕ್ಕೆ ಮತ್ತಷ್ಟು ಸಿಹಿ ಸುದ್ದಿ ನೀಡುತ್ತೇನೆ ಎಂದು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದರು.
 
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್ ಹಾಗೂ ಅನಂತಕುಮಾರ್ ಅವರನ್ನು ವಿಧಾನಸಭಾ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸೇರಿದಂತೆ ಸಂಸದ ಪ್ರಹ್ಲಾದ್ ಜೋಶಿ ಹಾಗೂ ಮೇಯರ್ ಮಂಜುಳಾ ಅಕ್ಕೂರ ಸ್ವಾಗತಿಸಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ತಿರಂತ ಯಾತ್ರೆ ಮಾಡುತ್ತಿದ್ದೇವೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿಯ ಚೆನ್ನಮ್ಮ ರತ್ನಕಟ್ಟಿಯವರನ್ನು ಸನ್ಮಾನಿಸುತ್ತಿದ್ದೇವೆ ಎಂದು ತಿಳಿಸಿದರು.
 
ರೋಹಿತ್ ವೇಮುಲ ಪ್ರಕರಣ..........
 
ರೋಹಿತ್ ವೇಮುಲ ಆತ್ಮಹತ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎ.ಕೆ.ರೂಪಣಕರ್ ಸಮಿತಿ ವರದಿ ನೀಡಿದೆ. ಸಮಿತಿ ನೀಡಿರುವ ವರದಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

ಮಹದಾಯಿ ಹೋರಾಟಗಾರರ ಮನವಿ......
 
ಇದೇ ವೇಳೆ, ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿ ಮಹದಾಯಿ ಹೋರಾಟಗಾರರು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಸರಕಾರದಿಂದ ದೇಶದ್ರೋಹಿಗಳಿಗೆ ಕುಮ್ಮಕ್ಕು: ಅನಂತಕುಮಾರ್