Publish Date: Sat, 25 Mar 2017 (18:22 IST)
Updated Date: Sat, 25 Mar 2017 (18:26 IST)
ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ ಹುದ್ದೆಗಳನ್ನು ಅನುಭವಿಸಿ ಕಾಂಗ್ರೆಸ್ ಪಕ್ಷದ ವಿರುದ್ಧವೇ ಟೀಕಿಸುತ್ತಿರುವ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರಿಗೆ ಬಿಜೆಪಿಯಲ್ಲಿ ಯಾವ ಹುದ್ದೆ ಸಿಗುತ್ತದೆ ಎಂದು ಹೋಗಿದ್ದಾರೋ ಗೊತ್ತಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಟಾಂಗ್ ನೀಡಿದ್ದಾರೆ.
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಒಮ್ಮಿಂದೊಮ್ಮೆಗೆ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರಾಗಿಲ್ಲ. ಕಳೆದ ಹಲವು ವರ್ಷಗಳಿಂದ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಪ್ರಧಾನಿ, ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಹುದ್ದೆಯನ್ನು ಹೊರತುಪಡಿಸಿ ಎಲ್ಲಾ ಹುದ್ದೆಗಳನ್ನು ಅನುಭವಿಸಿರುವ ಕೃಷ್ಣ, ಬಿಜೆಪಿಯಲ್ಲಿ ಯಾವ ಹುದ್ದೆ ಅಲಂಕರಿಸಲಿದ್ದಾರೆಯೇ ಎನ್ನುವುದನ್ನು ಕಾದು ನೋಡಬೇಕಾಗಿದೆ ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ. ರಾಹುಲ್ ಗಾಂಧಿಗೆ ನಾಯಕತ್ವದ ಯಾವುದೇ ಗುಣವಿಲ್ಲ ಎಂದು ಟೀಕಿಸಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.