ಚನ್ನಪಟ್ಟಣ ಟಿಕೆಟ್‌ಗಾಗಿ ಬಕಪಕ್ಷಿಯಂತೆ ಕಾಯ್ತಿದ್ದೇನೆ: ಯೋಗೇಶ್ವರ್

Sampriya
ಬುಧವಾರ, 16 ಅಕ್ಟೋಬರ್ 2024 (17:38 IST)
Photo Courtesy X
ಚನ್ನಪಟ್ಟಣ: ಕರ್ನಾಟಕ ಉಪಚುನಾವಣೆಗೆ ದಿನ ನಿಗದಿಯಾಗುತ್ತಿದ್ದ ಹಾಗೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಇನ್ನೂ ಹೈವೋಲ್ಟೆಜ್ ಕ್ಷೇತ್ರವಾದ ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್‌ ಹಾಗೂ ಎಚ್‌ ಡಿ ಕುಮಾರಸ್ವಾಮಿ ನಡುವೆ ಸ್ಪರ್ಧೆ ಜೋರಾಗಿ ಏರ್ಪಡುತ್ತಿದೆ.

ಇನ್ನೂ ಚನ್ನಪಟ್ಟಣ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಾನೇ ಸ್ಪರ್ಧೆ ಮಾಡುತ್ತೇನೆ. ಟಿಕೆಟ್‌ಗಾಗಿ ನಾನು ಭಕಪಕ್ಷಿಯಂತೆ ಕಾಯುತ್ತಿದ್ದು, ಹೆಸರು ಘೋಷಣೆ ಮಾಡಿದ ಕೂಡಲೇ ನಾಮಪತ್ರ ಸಲ್ಲಿಸುತ್ತೇನೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿಕೆ ಅಚ್ಚರಿ ಮೂಡಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿಮಾನಿಗಳು ಸ್ವಾಭಿಮಾನಿ ಸೈನಿಕನ ಸ್ಪರ್ಧೆ ಖಚಿತ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬೆಳೆಯಬೇಕೆಂದರೆ‌ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಲೇಬೇಕಿದೆ. ಈ‌ ಭಾಗದಲ್ಲಿ ಬಿಜೆಪಿಗೆ ನಾನೇ ಸೀನಿಯರ್. ಕುಮಾರಸ್ವಾಮಿ ಕೂಡಾ ಪ್ರಜ್ಞಾವಂತರಿದ್ದಾರೆ. ಕಾದುನೋಡಿ ಎಲ್ಲರನ್ನೂ ಸಮಾಧಾನ ಮಾಡಿ ನನಗೆ ಟಿಕೆಟ್ ಕೊಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದಿದ್ದಾರೆ.

ನನಗಿರುವ ಮಾಹಿತಿ ಪ್ರಕಾರ ಬಿಜೆಪಿ-ಜೆಡಿಎಸ್ ಮುಖಂಡರು ನನ್ನ ಹೆಸರನ್ನು ಅಂತಿಮಗೊಳಿಸುತ್ತಾರೆ. ನನಗೆ ಪಕ್ಷದ ವರಿಷ್ಠರ ಮೇಲೆ ಸಂಪೂರ್ಣ ವಿಶ್ವಾಸ ಇದೆ. ಹಾಗಾಗಿ ನಾನು ಚುನಾವಣಾ ಕಣದಲ್ಲಿರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವರ ಕುರ್ಚಿ ಕಾಳಗದಲ್ಲಿ ಕರ್ನಾಟಕದ ಉದ್ಯೋಗ ಆಂಧ್ರ ಪಾಲಾಗಿದೆ: ಛಲವಾದಿ ನಾರಾಯಣಸ್ವಾಮಿ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಮುಂದಿನ ಸುದ್ದಿ
Show comments