Publish Date: Thu, 06 Sep 2018 (19:22 IST)
Updated Date: Thu, 06 Sep 2018 (19:24 IST)
ವಕ್ಫ್ ಆಸ್ತಿ ಕಬಳಿಕೆಗೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ.
ಬೆಂಗಳೂರಿನ ಮಹಾತ್ಮಗಾಂಧಿ ಪ್ರತಿಮೆ ಮುಂಭಾಗದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಬಿಜೆಪಿಯ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿ, ವಕ್ಫ್ ಆಸ್ತಿ ಕಬಳಿಕೆಗೆ ಸಂಬಂಧಿಸಿದಂತೆ ಅನ್ವರ್ ಮಾನ್ಪಾಡಿ ವರದಿಯನ್ನು ಸದನದಲ್ಲಿ ಮಂಡಿಸಬೇಕು. ಈ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು.
ಬೇಡಿಕೆ ಈಡೇರುವರೆಗೆ ಹೋರಾಟ ನಿಲ್ಲದು ಎಂದು ಬಿಜೆಪಿ ಮುಖಂಡರು ಎಚ್ಚರಿಸಿದರು.